ಮಂಗಳವಾರ, ನವೆಂಬರ್ 29, 2022
29 °C

ಅಗತ್ಯಕ್ಕೆ ತಕ್ಕಂತೆ ಇಂಗ್ಲಿಷ್‌ ಶಿಕ್ಷಕರ ನೇಮಕವಾಗುತ್ತಿಲ್ಲ: ಬಿ.ಸಿ.ನಾಗೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅರಸೀಕೆರೆ (ಹಾಸನ ಜಿಲ್ಲೆ): ‘ರಾಜ್ಯದಲ್ಲಿ ಆಂಗ್ಲ ಮಾಧ್ಯಮದ ಪಬ್ಲಿಕ್‌ ಶಾಲೆಗಳನ್ನು ಸ್ಥಾಪಿಸಿ ಮೂರು ವರ್ಷಗಳಾದರೂ ಅಗತ್ಯಕ್ಕೆ ತಕ್ಕಂತೆ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಲು ಸಾಧ್ಯವಾಗುತ್ತಿಲ್ಲ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ನಗರದಲ್ಲಿ ಶನಿವಾರ ಸೇವಾ ಸಂಕಲ್ಪ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದರೂ ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವುದು ವಿಷಾದನೀಯ. ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವುದು ವಿಪರ್ಯಾಸ’ ಎಂದರು.

‘ನಾನು ರಾಜ್ಯದೆಲ್ಲೆಡೆ ಸುತ್ತಿ ಶಿಕ್ಷಣ ಮತ್ತು ಸರ್ಕಾರಿ ಶಾಲೆಗಳ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದ ಸಂದರ್ಭ, ಎಲ್ಲರೂ ಒಳ್ಳೆಯ ಶಿಕ್ಷಕರನ್ನು ಹಾಗೂ ಸಂಸ್ಕಾರಯುತ ಶಿಕ್ಷಣ ಬೇಕೆಂದು ಕೇಳಲಿಲ್ಲ. ಆಂಗ್ಲ ಮಾಧ್ಯಮದ ಶಾಲೆಗಳನ್ನು ಕೊಡಿ ಎಂದು ಕೇಳುತ್ತಿದ್ದರು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು