ಶನಿವಾರ, ಏಪ್ರಿಲ್ 1, 2023
23 °C
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುನ್ನೇಚ್ಚರಿಕೆ ಕ್ರಮ ವಹಿಸಿ: ಡಿ. ಸಿ

ಸೋಂಕಿತರಿಗೆ ಆರೈಕೆ ಕೇಂದ್ರದಲ್ಲಿ ಪರೀಕ್ಷೆ: ಜಿಲ್ಲಾಧಿಕಾರಿ ಆರ್.ಗಿರೀಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜುಲೈ 19 ಹಾಗೂ 22 ರಂದು ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾವುದೇ ಲೋಪದೋಷವಾಗದಂತೆ ನಡೆಸಲು ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಗುರುವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಪರೀಕ್ಷೆಗೆ ಗ್ರಾಮಾಂತರ ಪ್ರದೇಶಗಳಿಂದ ಬರುವಂತಹ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಬಸ್ ಸಂಚರಿಸಲು ಕ್ರಮವಹಿಸಬೇಕು ಎಂದರು.

ರೋಗ ಲಕ್ಷಣ ಕಂಡು ಬಂದ ಮಕ್ಕಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ನಡೆಸಿ ಹಾಗೂ ಕೋವಿಡ್ ಪಾಸಿಟಿವ್ ಇರುವ ಮಕ್ಕಳಿಗೆ ಕೋವಿಡ್ ಕೇರ್ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪರೀಕ್ಷೆ ನಡೆಯುವ ಮುನ್ನ ಹಾಗೂ ಪರೀಕ್ಷೆ ಮುಗಿದ ನಂತರ ಕೊಠಡಿಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್ ಇರುವಂತೆ ಗಮನಹರಿಸಬೇಕು. ಯಾವುದೇ ತೊಂದರೆ
ಉಂಟಾಗದಂತೆ ಪರೀಕ್ಷಾ ಕಾರ್ಯ ಯಶಸ್ವಿಗೊಳಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಮಟ್ಟದಲ್ಲಿ ಹಾಗೂ ಪ್ರತಿ ತಾಲೂಕಿನಲ್ಲಿ ಎರಡು ಹೆಚ್ಚುವರಿ ಪರೀಕ್ಷೆ ಕೇಂದ್ರ ಸ್ಥಾಪಿಸುವಂತೆ ತಿಳಿಸಿದರಲ್ಲದೇ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಕೇಂದ್ರ ತೆರೆಯಬೇಕು. ಪರೀಕ್ಷೆ ಬರೆಯುವ ಕೋವಿಡ್ ಪಾಸಿಟಿವ್
ಹೊಂದಿದ ಮಕ್ಕಳ ವಿವರಗಳನ್ನು ನೀಡುವಂತೆ ಅಧಿಕಾರಿಗಳಿಗೆ ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ನಂದಿನಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ. ಸತೀಶ್ ಕುಮಾರ್‌, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್,
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆ.ಎಸ್.ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಜರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು