ಶುಕ್ರವಾರ, ಮಾರ್ಚ್ 5, 2021
30 °C
ಎರಡು ವರ್ಷದ ಮಗು ಅನುಮಾಸ್ಪದ ಸಾವು

ಹೂತಿದ್ದ ಶವ ಹೊರ ತೆಗೆದು ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನುಗ್ಗೇಹಳ್ಳಿ: ಹೋಬಳಿಯ ಹುಲ್ಲೇನಹಳ್ಳಿ ಗ್ರಾಮದಲ್ಲಿ ಎರಡು ವರ್ಷದ ಗಂಡು ಮಗು ಅನುಮಾನಾಸ್ಪದವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಹೂತ್ತಿದ್ದ ಶವ ಹೊರ ತೆಗೆದು ಪರೀಕ್ಷೆ ನಡೆಸಲಾಯಿತು.

ಗ್ರಾಮದ ನಂಜಪ್ಪ, ಸುಮಾ ದಂಪತಿಯ ಮಗು ಜ. 19 ರಂದು ಮನೆಯಲ್ಲೇ ಮೃತಪಟ್ಟಿತ್ತು. ಕುಟುಂಬಸ್ಥರು ಅಂದೇ ತಮ್ಮ ತೋಟದಲ್ಲಿ ಅಂತ್ಯಸಂಸ್ಕಾರ ಮಾಡಿದ್ದರು. ಆದರೆ, ಸಾವಿನ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಮಗುವಿನ ತಂದೆ ನುಗ್ಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸೋಮವಾರ ಹೂತಿದ್ದ ಶವವನ್ನು ಹೊರತೆಗೆದು, ತಹಶೀಲ್ದಾರ್ ಜೆ.ಬಿ. ಮಾರುತಿ, ಡಿವೈಎಸ್ಪಿ ಲಕ್ಷ್ಮೇಗೌಡ, ವೃತ್ತ ನಿರೀಕ್ಷಕ ಜಿ.ಕೆ. ಸುಬ್ರಹ್ಮಣ್ಯ ಅವರ ಸಮ್ಮುಖದಲ್ಲಿ ಡಾ.ಸಂತೋಷ್ ಪರೀಕ್ಷೆ ನಡೆಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು