ಭಾನುವಾರ, ಮೇ 22, 2022
22 °C
ಗೋದಾಮಿಗೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು

ಅವಧಿ ಮುಗಿದ ಆಹಾರ ಪದಾರ್ಥ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ನಗರದ ಕುವೆಂಪು ಬಡಾವಣೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಗೋದಾಮಿನಲ್ಲಿ ಅವಧಿ ಮುಗಿದ ಆಹಾರ ಪದಾರ್ಥ ಪತ್ತೆಯಾಗಿದೆ. 

ಗರ್ಭಿಣಿ, ಬಾಣಂತಿಯರು ಮತ್ತು ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ ಎಂಬ ಆರೋಪದ ಮೇರೆಗೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪರಶುರಾಮ್ ಶೆಟ್ಟಪ್ಪನವರ್, ಜಿಲ್ಲಾ ಆಹಾರ ಮತ್ತು ಸುರಕ್ಷತಾ ಅಂಕಿತ ಅಧಿಕಾರಿ ಅನಿಲ್ ಧವನ್ ಮತ್ತು ಸಿಬ್ಬಂದಿ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಸಾಸಿವೆ, ಕಡಲೆಬೇಳೆ, ಹೆಸರು ಕಾಳು ಪ್ಯಾಕೆಟ್‌ಗಳ ಅವಧಿ ಕಳೆದ ಮಾರ್ಚ್‌, ಏಪ್ರಿಲ್‌ಗೆ ಮುಗಿದಿರುವುದು ಕಂಡು ಬಂತು. ಆ ಪದಾರ್ಥಗಳನ್ನು ವಶಪಡಿಸಿಕೊಂಡರು.

‘ಗೋದಾಮಿಗೆ ಯಾರು ಆಹಾರ ಪದಾರ್ಥ ಪೂರೈಕೆ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಅಧಿಕಾರಿಗಳು ಭರವಸೆ ನೀಡಿದರು.

‘ತಾಲ್ಲೂಕು ಮಹಿಳಾ ಸಿಡಿಪಿಗೆ ದೃಷ್ಟಿ ದೋಷ ಇರುವುದನ್ನೇ ಲಾಭ ಮಾಡಿಕೊಂಡಿರುವ ಅನೇಕರು ವ್ಯವಹಾರ ನಡೆಸಿದ್ದಾರೆ. ಹಿಂದೆಯೂ ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ತೆಗೆದುಕೊಂಡಿಲ್ಲ  ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರೇವಣ್ಣ ಆರೋಪಿಸಿದರು.

‘ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಅಧಿಕಾರಿಗಳನ್ನು ಗೋದಾಮಿಗೆ ಕಳುಹಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೂ ನಿರ್ದೇಶನ ನೀಡಲಾಗಿದೆ. ಕರ್ತವ್ಯ ಲೋಪ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಪ್ರೀತಂ ಗೌಡ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು