ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲೂರು: ಸೌಲಭ್ಯ ವಂಚಿತ ಬಾಲಕಿಯರ ಪದವಿಪೂರ್ವ ಕಾಲೇಜು

ವಿದ್ಯಾರ್ಥಿನಿಯರಿಗೆ ಇಲ್ಲ ರಕ್ಷಣೆ; 6 ಕೊಠಡಿಗಳು, ಕಂಪ್ಯೂಟರ್ ಲ್ಯಾಬ್ ಅಗತ್ಯ
Last Updated 9 ನವೆಂಬರ್ 2021, 4:44 IST
ಅಕ್ಷರ ಗಾತ್ರ

ಆಲೂರು: ಗ್ರಾಮೀಣ ಪ್ರದೇಶದ ಬಡ ವರ್ಗದ ಹೆಣ್ಣು ಮಕ್ಕಳೇ ಹೆಚ್ಚಾಗಿ ವ್ಯಾಸಂಗ ಮಾಡುವ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮೂಲಸೌಕರ್ಯಗಳಿಲ್ಲದೆ ನಲುಗುತ್ತಿದೆ.

2007ರಲ್ಲಿ ಪ್ರಾರಂಭವಾದ ಕಾಲೇಜು 2018ರವರೆಗೆ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳಲ್ಲಿ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ಜಗಲಿ ಮೇಲೆ ವಿದ್ಯಾರ್ಥಿಗಳನ್ನು ಕೂರಿಸಿ ಪಾಠ ಮಾಡಲಾಗುತ್ತಿತ್ತು.

2018ರಲ್ಲಿ 37 ಗುಂಟೆ ಜಾಗದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಿ ಕಾಲೇಜನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಕಟ್ಟಡದಲ್ಲಿ ಕೇವಲ ನಾಲ್ಕು ಕೊಠಡಿಗಳಿವೆ. ಪ್ರಾಂಶುಪಾಲರು, ಉಪನ್ಯಾಸಕರ ಶ್ರಮದಿಂದ ಪ್ರತಿ ವರ್ಷ ಶೇ 80ಕ್ಕೂ ಹೆಚ್ಚು ಫಲಿತಾಂಶ ಬರುತ್ತಿದ್ದು, ತಾಲ್ಲೂಕಿಗೆ ಪ್ರಥಮ ಸ್ಥಾನದಲ್ಲಿದೆ.

ಸದ್ಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ನೀಟ್, ಸಿಇಟಿ ತರಬೇತಿ ನೀಡಲಾಗುತ್ತಿದೆ. ಈ ಕಾಲೇಜಿಗೆ ಕಾಂಪೌಂಡ್ ಇಲ್ಲದೆ ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲವಾಗಿದೆ. ಪ್ರಾಂಶುಪಾಲರು, ಉಪನ್ಯಾಸಕರಿಗೆ ಪ್ರತ್ಯೇಕ ಕೊಠಡಿ, ಶೌಚಾಲಯ ಇಲ್ಲ. ವಿದ್ಯಾರ್ಥಿನಿಯರಿಗೆ ಮಾತ್ರ ಶೌಚಾಲಯವಿದೆ.

ಕಾಲೇಜಿಗೆ ಕನಿಷ್ಠ 6 ಕೊಠಡಿಗಳು, ಲ್ಯಾಬ್, ಕಂಪ್ಯೂಟರ್ ಕೊಠಡಿ, ಸಭಾಂಗಣ, ಕಾಂಪೌಂಡ್, ಶೌಚಾಲಯದ ಅಗತ್ಯವಿದೆ. ಈ ಬಗ್ಗೆ ಸರ್ಕಾರ ಕೂಡಲೇ ಗಮನಹರಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಇದು ಬಾಲಕಿಯರ ಕಾಲೇಜು ಆಗಿರುವುದರಿಂದ ಅವರ ರಕ್ಷಣೆ ಬಗ್ಗೆ ಶೀಘ್ರ ಗಮನ ಹರಿಸಬೇಕು ಎಂಬುದು ಪೋಷಕರ ಆಗ್ರಹವಾಗಿದೆ.

***

ಕಾಲೇಜಿಗೆ ಕಾಂಪೌಂಡ್ ಇಲ್ಲದಿದ್ದರೆ ಹೆಣ್ಣು ಮಕ್ಕಳ ರಕ್ಷಣ ಹೇಗೆ? ಕಾಲೇಜು ವ್ಯಾಪ್ತಿಯಲ್ಲಿ ಏನಾದರೂ ಅಚಾತುರ್ಯ ನಡೆದರೆ ಯಾರು ಜವಾಬ್ದಾರರು? ಕೂಡಲೆ ಅಗತ್ಯ ಸೌಲಭ್ಯ ನೀಡಬೇಕು

-ಪುಟ್ಟರಾಜು, ಪೋಷಕ, ಮಡಬಲು

***

ಕಾಲೇಜಿನಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ. ಆದರೆ, ನಮಗೆ ಯಾವುದೇ ರಕ್ಷಣೆ ಇಲ್ಲ. ಕೊಠಡಿ ಸೌಲಭ್ಯವಿಲ್ಲ. ತಕ್ಷಣ ಸೌಲಭ್ಯ ಒದಗಿಸಿ ನಮ್ಮನ್ನು ರಕ್ಷಣೆ ಮಾಡಲಿ

-ಸಚಿತ್ರಾ, ದ್ವಿತೀಯ ಪಿಯು ವಿದ್ಯಾರ್ಥಿನಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT