ಹಾಸನ: ಉದ್ದೇಶಪೂರ್ವಕವಾಗಿ ಸುಳ್ಳು ಜಾತಿ ಪ್ರಮಾಣಪತ್ರ ನೀಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಎಚ್.ಆರ್. ರಾಮಕೃಷ್ಣ ಅವರಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ವಿವಿಧ ಕಲಂಗಳ ಅಡಿ ಜೈಲು ಶಿಕ್ಷೆ ವಿಧಿಸಿದೆ.
ಅಲ್ಲದೇ ನ್ಯಾಯಾಲಯದ ಆದೇಶವಾದ ಅ.18ರಿಂದ ಮುಂದಿನ 10 ವರ್ಷ ಯಾವುದೇ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಬಾರದು ಎಂದು ನಿರ್ಬಂಧ ವಿಧಿಸಿದೆ.
ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದ ಎಚ್.ಆರ್. ರಾಮಕೃಷ್ಣ ಅವರು, ‘ದೇಶಬಾಗ್’ ಜಾತಿಗೆ ಸೇರಿದ್ದು, ಸುಳ್ಳು ಮಾಹಿತಿ ನೀಡಿ ಅರಸೀಕೆರೆ ತಹಶೀಲ್ದಾರರಿಂದ ‘ಚೆನ್ನದಾಸ’ ಜನಾಂಗಕ್ಕೆ ಸೇರಿರುವುದಾಗಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದಿದ್ದರು. ಅದರ ಆಧಾರದಲ್ಲಿ 1999–2000ರಲ್ಲಿ ನಡೆದ ಅರಸೀಕೆರೆ ತಾಲ್ಲೂಕಿನ ಡಿ.ಎಂ. ಕುರ್ಕೆ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಆ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸದಾನಂದ ಸ್ವಾಮಿ ಶಿಕ್ಷೆ ವಿಧಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.