ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸನ | ಕೌಟುಂಬಿಕ ಕಲಹ: ಪತ್ನಿಯನ್ನು ಇರಿದು ಕೊಲೆ ಮಾಡಿದ ಕಾನ್‌ಸ್ಟೆಬಲ್‌

Published 1 ಜುಲೈ 2024, 7:58 IST
Last Updated 1 ಜುಲೈ 2024, 7:58 IST
ಅಕ್ಷರ ಗಾತ್ರ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು, ಪೊಲೀಸ್ ಕಾನ್‌ಸ್ಟೆಬಲ್‌ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಹಾಸನ ನಗರ ಠಾಣೆಯ ಕಾನ್‌ಸ್ಟೆಬಲ್‌ ಲೋಕನಾಥ್ ಅವರ ಪತ್ನಿ ಮಮತಾ, ಪತಿಯಿಂದಲೇ ಕೊಲೆಯಾದವರು. ಆಕೆಯನ್ನು ಚಾಕುವಿನಿಂದ ಇರಿದಿದ್ದನ್ನು ಕಂಡ ಪೊಲೀಸರು, ತಕ್ಷಣವೇ ಹಿಮ್ಸ್ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು. ಪೊಲೀಸರು ಆರೋಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ.

ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಸೋಮವಾರ ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಬಂದಿದ್ದ ಪತ್ನಿಯ ಮೇಲೆ ಸಿಟ್ಟಿಗೆದ್ದ ಲೋಕನಾಥ್, ಕೊಲೆ ಮಾಡಿದ್ದಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT