ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಲೂರು: ಕಳೆನಾಶಕ ಸೇವಿಸಿದ್ದ ರೈತ ಆತ್ಮಹತ್ಯೆ

Published 1 ಮೇ 2024, 14:19 IST
Last Updated 1 ಮೇ 2024, 14:19 IST
ಅಕ್ಷರ ಗಾತ್ರ

ಬೇಲೂರು: ತಾಲ್ಲೂಕಿನ ಬಿಕ್ಕೋಡು ಹೋಬಳಿ ಚೌಡನಹಳ್ಳಿಯ ರೈತ ಚಂದ್ರಯ್ಯ (48) ಕಳೆನಾಶಕ ಸೇವಿಸಿ ಮೃತಪಟ್ಟರು.

‘ಚಂದ್ರಯ್ಯ ಅವರು ಶುಂಠಿ ಬೆಳೆಯಲು ಇಬ್ಬೀಡು ಕೆನರಾ ಬ್ಯಾಂಕ್‌ನಲ್ಲಿ ಹಾಗೂ ವಿವಿಧ ಸಂಘ, ಸಂಸ್ಥೆಗಳಲ್ಲಿ ಸಾಲ ಮಾಡಿದ್ದರು. ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ಬೆಳೆ ಕೈಕೊಟ್ಟಿದ್ದು, ಏಪ್ರಿಲ್ 19 ರಂದು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಹಾಸನದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಬುಧವಾರ ಆರೋಗ್ಯದಲ್ಲಿ ಏರುಪೇರಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.

ಚಂದ್ರಯ್ಯ ಅವರಿಗೆ ಪತ್ನಿ ವಸಂತ, ಪುತ್ರ ಲೋಕೇಶ್, ಪುತ್ರಿ ಹೇಮಾವತಿ ಇದ್ದಾರೆ.

ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT