ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಯ್ದೆ ಹಿಂಪಡೆಯಲು ಮುಖಂಡರ ಆಗ್ರಹ

Last Updated 26 ಸೆಪ್ಟೆಂಬರ್ 2020, 2:25 IST
ಅಕ್ಷರ ಗಾತ್ರ

ಅರಸೀಕೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರಲು ಉದ್ದೇಶಿಸಿ ರುವ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಭೂ ಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಹಾಗೂ ಇತರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ ತಾಲ್ಲೂಕಿನ ಕೆಲವು ರೈತರು ಈ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವಂತೆ ಆಗ್ರಹಿಸಿ ತಹಶೀಲ್ದಾರ್ ಸಂತೋಷ್ ಕುಮಾರ್‌ಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಜಿಲ್ಲಾ ರೈತ ಸಂಘದ ಕಾರ್ಯದರ್ಶಿ ಬೋರನಕೊಪ್ಪಲು ಜಯರಾಮ್ ಮಾತನಾಡಿ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಭೂ ಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವ ದಲ್ಲಿ ಸೆ.21ರಿಂದ ಧರಣಿ ಮತ್ತು ಪ್ರತಿಭಟನೆ ನಡೆಸಲಾಗುತ್ತಿದೆ. ರೈತ ವಿರೋಧಿಯಾಗಿರುವ ಈ ಎರಡೂ ಕಾಯ್ದೆಗಳನ್ನು ಸರ್ಕಾರ ಹಿಂದಕ್ಕೆ ಪಡೆಯದೆ ಇದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ರೈತ ಸಂಘಟನೆಗಳು ಹಾಗೂ ಪರಿಶಿಷ್ಟ ಜಾತಿ, ಪಂಗಡದ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಹಮ್ಮಿಕೊಂಡಿರುವ ಸೆ.28ರ ಕರ್ನಾಟಕ ಬಂಸ್‌ಗೆ ಬೆಂಬಲ ಇದೆ ಎಂದರು.

ಸೆ.25ರಂದು ನಡೆದ ಬಂದ್‌ಗೆ ತಾಲ್ಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾ ಯಿತು. ನಗರದಲ್ಲಿ ದಿನದ ವ್ಯಾಪಾರ, ವಹಿವಾಟು ಎಂದಿನಂತೆ ನಡೆಯಿತು. ಅಂಗಡಿ, ಮುಂಗಟ್ಟುಗಳಲ್ಲೂ ವ್ಯಾಪಾರ ವಹಿವಾಟು ಸಾಮಾನ್ಯವಾಗಿತ್ತು.

ರೈತ ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿಗಳಾದ ಮೂರ್ತಿ, ಕೋರ ನಹಳ್ಳಿ ಕುಮಾರ್ ನಾಯ್ಕ್, ಉಪಾಧ್ಯಕ್ಷ ಪುರ್ಲೇಹಳ್ಳಿ ಮಣಿ, ಜಾವಗಲ್ ಹೋಬಳಿ ಅಧ್ಯಕ್ಷ ಸಿದ್ದಪ್ಪ, ತಾಲ್ಲೂಕು ಹಸಿರು ಸೇನೆ ಅಧ್ಯಕ್ಷ ಚಂದ್ರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT