ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

21ಕ್ಕೆ ರಾಷ್ಟ್ರೀಯ ಕರಾಟೆ ಪಂದ್ಯಾವಳಿ

ಅಂತರ ಜಿಲ್ಲೆ, ರಾಜ್ಯಗಳ 300 ಕ್ರೀಡಾಪಟುಗಳು ಭಾಗಿ: ಆರಿಫ್‌
Last Updated 18 ಫೆಬ್ರುವರಿ 2021, 12:58 IST
ಅಕ್ಷರ ಗಾತ್ರ

ಹಾಸನ: ಕೊರೊನಾ ನಂತರ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ರಾಷ್ಟ್ರಮಟ್ಟದ ‘ಹಾಸನ್ ಓಪನ್’ ಕರಾಟೆ ಪಂದ್ಯಾವಳಿಯನ್ನು ಫೆ.21 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಾಸನ ಜಿಲ್ಲಾ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಮಹಮದ್ ಆರಿಫ್ ತಿಳಿಸಿದರು.

ಕರ್ನಾಟಕ ಕರಾಟೆ ಸಂಸ್ಥೆ ಹಾಗೂ ಜಿಲ್ಲಾ ಕರಾಟೆ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಅಂದು ಬೆಳಗ್ಗೆ 11 ಗಂಟೆಗೆನಗರದ ಅಂಬೇಡ್ಕರ್ ಭವನದಲ್ಲಿ ಪಂದ್ಯಾವಳಿ ಉದ್ಘಾಟನೆಯಾಗಲಿದೆ. ರಾಜ್ಯದ ಬೆಂಗಳೂರು, ಮೈಸೂರು, ಶಿವಮೊಗ್ಗ, ಮಂಡ್ಯ, ಬಳ್ಳಾರಿ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಚಿಕ್ಕಮಗಳೂರು ಹಾಗೂ ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ ರಾಜ್ಯಗಳಿಂದ ಸುಮಾರು 300 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕತಾ ಮತ್ತು ಕಮತೇ ವಿಭಾಗದಲ್ಲಿ 5 ವರ್ಷ ಮೆಲ್ಪಟ್ಟ ಹಾಗೂ 40 ವರ್ಷದ ಒಳಗಿನವರು ಪಂದ್ಯಾವಳಿಯಲ್ಲಿ
ಭಾಗವಹಿಸಬಹುದು. ಕತಾ ವಿಭಾಗದಲ್ಲಿ ಸುಮಾರು 125 ಆಕ್ಷನ್ ಪ್ರದರ್ಶಿಸಬಹುದು. ಇದರಲ್ಲಿ ಪ್ರಥಮ ಹಾಗೂ ದ್ವಿತೀಯಸ್ಥಾನ ಪಡೆದವರು ಬಹುಮಾನದ ಜೊತೆಗೆ ಶಿವಮೊಗ್ಗದಲ್ಲಿ ನಡೆಯುವ ಅಂತರರಾಷ್ಟ್ರೀಯ ಪಂದ್ಯಾವಳಿಯಲ್ಲಿ
ಭಾಗವಹಿಸುವರು. ಹಾಗೆಯೇ ಕುಮತೇ ವಿಭಾಗದಲ್ಲಿ 10 ಕೆ.ಜಿಯಿಂತೆ ತಲಾ 8 ಮಂದಿ ಕರಾಟೆ ಪಟುಗಳನ್ನು ಒಳಗೊಂಡನಾಲ್ಕು ವಿಭಾಗ ಮಾಡಲಾಗಿದೆ ಎಂದು ವಿವರಿಸಿದರು.

ಹೊರಗಿನಿಂದ ಬರುವವರಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು-ಪುರುಷರೂ ಟೂರ್ನಿಯಲ್ಲಿ
ಭಾಗವಹಿಸಬಹುದು. ಕೊರೊನಾ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸ್ಥಳೀಯ ಶಾಸಕ ಪ್ರೀತಂ ಜೆ.ಗೌಡ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಹಾಸನ ಡಿವೈಎಸ್ಪಿ ಪುಟ್ಟಸ್ವಾಮಿಗೌಡ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಯುವಜನ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಹರೀಶ್ ಸಿ.ಕೆ., ಡಿಡಿಪಿಐ ಪ್ರಕಾಶ್, ನಗರಸಭೆ ಆಯುಕ್ತ ಕೃಷ್ಣಮೂರ್ತಿ ಭಾಗವಹಿಸಲಿದ್ದಾರೆ ಎಂದರು.

ಗೋಷ್ಟಿಯಲ್ಲಿ ಅಜಂಖಾನ್, ಮಹಮದ್ ಸಾದಿಕ್, ಸಲ್ಮಾನ್, ಇಮ್ರಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT