ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರೂಣ ಹತ್ಯೆ ಕಾನೂನು ಬಾಹಿರ: ಡಾ.ವಿಜಯ್

Published 13 ಡಿಸೆಂಬರ್ 2023, 12:48 IST
Last Updated 13 ಡಿಸೆಂಬರ್ 2023, 12:48 IST
ಅಕ್ಷರ ಗಾತ್ರ

ಬೇಲೂರು: ಭ್ರೂಣ ಹತ್ಯೆ ಹಾಗೂ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಜಯ್ ತಿಳಿಸಿದರು.

ಇಲ್ಲಿನ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ, ಭ್ರೂಣ ಹತ್ಯೆ ನಿಯಂತ್ರಣ ಕುರಿತು ಅರಿವು ಮೂಡಿಸುವ, ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಭ್ರೂಣಹತ್ಯೆ ಮಾಡುವ ವೈದ್ಯರಿಗೆ, ಜಾಹೀರಾತು ನೀಡುವವರಿಗೆ, ಲ್ಯಾಬ್‌ಗಳಲ್ಲಿ ಪತ್ತೆ ಕಾರ್ಯ ನಡೆಸುವವರಿಗೆ ದಂಡದೊಂದಿಗೆ ಶಿಕ್ಷೆ ಸಹ ಇದೆ. ಕೆಲ ವೈದ್ಯರು ಪ್ರಸವ ಪೂರ್ವ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆಯಂತಹ ಪರಿಪಾಠ ಮುಂದುವರಿಸಿದಲ್ಲಿ ಅವರ ವೈದ್ಯಕೀಯ ವೃತ್ತಿಗೆ ಸಂಚಕಾರ ಬರಲಿದೆ. ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ ಲಿಂಗ ಸಮಾನತೆಯನ್ನು ಕಾಪಾಡ ಬೇಕಿದೆ ಎಂದರು.

ತಾಲ್ಲೂಕಿನ ಕೆಲ ಗ್ರಾಮ ಹಾಗೂ ಪಟ್ಟಣದ ಆಯ್ದ ಸ್ಥಳಗಳಲ್ಲಿ ಪ್ರಸವ ಪೂರ್ವ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣ ಕಾಯ್ದೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೀದಿ ನಾಟಕ ಏರ್ಪಡಿಸಲಾಗಿದೆ ಎಂದರು.

ಬೀದಿ ನಾಟಕದ ಜಾನಪದ ಕಲಾತಂಡದ ಮುಖ್ಯಸ್ಥ ಗುಂಡುರಾಜ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಉಷಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದಯಾನಂದ್, ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿ ಮಂಗಳಮ್ಮ, ಸುರಕ್ಷತಾಧಿಕಾರಿ ಕಾವ್ಯ, ನಾಗರತ್ನಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT