ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತಿಮ ನಿರ್ಧಾರ ಜನರಿಗೆ ಸೇರಿದ್ದು: ಸಂಸದ ಡಿ.ವಿ. ಸದಾನಂದ ಗೌಡ

Last Updated 10 ಮಾರ್ಚ್ 2023, 7:34 IST
ಅಕ್ಷರ ಗಾತ್ರ

ಹಾಸನ: ನಾವು ನಮ್ಮ ಸಾಧನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ವಿಜಯ ಸಂಕಲ್ಪ ಯಾತ್ರೆ ಮಾಡುತ್ತಿದ್ದೇವೆ. ಕಾಂಗ್ರೆಸ್‌–ಜೆಡಿಎಸ್‌ ಪಕ್ಷಗಳು ತಮ್ಮ ಕಾರ್ಯಕ್ರಮಗಳನ್ನು ಜನರ ಮುಂದಿಡುವ ಕೆಲಸ ಮಾಡಲಿ. ಅಂತಿಮವಾಗಿ ಜನರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಂಸದ ಡಿ.ವಿ. ಸದಾನಂದಗೌಡ ಹೇಳಿದರು.

ಹೊಳೆನರಸೀಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಅನಗತ್ಯ ಟೀಕೆ, ಟಿಪ್ಪಣೆಗಳನ್ನು ಮಾಡುವುದರಲ್ಲಿ ಅರ್ಥವಿಲ್ಲ. ಜನರಿಗೆ ಬೇಕಾಗಿರುವ ಸೌಲಭ್ಯಗಳ ಬಗ್ಗೆ ಮಾತನಾಡಿ ಎಂದರು.

ದೇವೇಗೌಡರು ಪ್ರಧಾನಿ ಆದವರು. ಕುಮಾರಸ್ವಾಮಿ ಮುಖ್ಯಮಂತ್ರಿ ಆದವರು. ಸಿದ್ದರಾಮಯ್ಯ 13 ಬಜೆಟ್‌ಗಳನ್ನು ಮಂಡಿಸಿದವರು. ನಮ್ಮಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದರು. ಈಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾರೆ. ಹೀಗಾಗಿ ಎಲ್ಲ ಪಕ್ಷಗಳು ತಮ್ಮ ಅವಧಿಯಲ್ಲಿ ಏನು ಕಾರ್ಯಕ್ರಮ ಕೊಟ್ಟಿವೆ. ಅದರಿಂದ ಜನರಿಗೆ ಏನು ಅನುಕೂಲ ಆಗಿದೆ ಎನ್ನುವುದನ್ನು ಹೇಳಿಕೊಳ್ಳಲಿ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಂತರ ಬಿಜೆಪಿ ಚುನಾವಣೆ ನೀತಿ ಅಳವಡಿಸಿಕೊಂಡಿದೆ. ಇಲ್ಲಿಯವರೆಗೆ ಭರವಸೆಗಳ ಆಧಾರದಲ್ಲಿ ಚುನಾವಣೆ ನಡೆಯುತ್ತಿತ್ತು. ಆದರೆ ಈಗ ಜನರ ಸಮಸ್ಯೆಗಳಿಗೆ ಎಷ್ಟರ ಮಟ್ಟಿಗೆ ಸ್ಪಂದಿಸಿದ್ದೇವೆ ಎನ್ನುವ ರಿಪೋರ್ಟ್‌ ಕಾರ್ಡ್‌ ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಇದನ್ನು ಪರಿಗಣಿಸಿ, ಜನರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT