ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ನಿತ್ಯ ಐದು ಸಾವಿರ ಕೋವಿಡ್‌ ಪರೀಕ್ಷೆ: ಜಿಲ್ಲಾಧಿಕಾರಿ ಗಿರೀಶ್‌

ಕೋವಿಡ್‌ ನಿಯಂತ್ರಣಕ್ಕಾಗಿ ನಿರ್ಬಂಧ ವಿಧಿಸಲು ಅಧಿಕಾರ
Last Updated 30 ಜುಲೈ 2021, 15:11 IST
ಅಕ್ಷರ ಗಾತ್ರ

ಹಾಸನ: ಕೇರಳ ಸೇರಿದಂತೆ ನೆರೆ ರಾಜ್ಯಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಬಿದ್ದರೆ ಕೆಲ ನಿರ್ಬಂಧಗಳನ್ನೂ ವಿಧಿಸಲು ರಾಜ್ಯ ಮುಖ್ಯ ಕಾರ್ಯದರ್ಶಿಅಧಿಕಾರ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ವೀಡಿಯೋ ಸಂವಾದದಲ್ಲಿ ಉಸ್ತುವಾರಿ ಸಚಿವರ ನೇಮಕವಾಗುವವರೆಗೆಅಗತ್ಯ ನಿರ್ಬಂಧ ವಿಧಿಸಲು ಜಿಲ್ಲಾಧಿಕಾರಿಗೆ ಅಧಿಕಾರ ನೀಡುವುದಾಗಿ ತಿಳಿಸಿದ್ದಾರೆ. ಹಾಗಾಗಿಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಕೋವಿಡ್ -19 ಪಾಸಿಟಿವಿಟಿ ದರ ಕಡಿಮೆ ಆಗುತ್ತಿದೆ. ಆದರೆ ನಿತ್ಯ 130 ರಿಂದ 150 ಕೋವಿಡ್‌ ಪ್ರಕರಣ ವರದಿ ಆಗುತ್ತಿರುವುದರಿಂದ ಎಚ್ಚರ ವಹಿಸಬೇಕಾಗಿದೆ. ಪ್ರತಿದಿನ 4,500 ರಿಂದ 5,000 ಕೋವಿಡ್ ಪರೀಕ್ಷೆ ನಡೆಸಲಾಗುತಿದೆ. ಅಗತ್ಯವಿದ್ದಲ್ಲಿ ಹೆಚ್ಚಿನ ಪರೀಕ್ಷೆಮಾಡಲಾಗುವುದು ಎಂದು ತಿಳಿಸಿದರು.

ಮೂರನೇ ಅಲೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹಿಮ್ಸ್ ನಲ್ಲಿ ಎಂಟು ವೆಂಟಿಲೇಟರ್‌ ಸೌಲಭ್ಯವುಳ್ಳ 18 ಹಾಸಿಗೆಯ ಮಕ್ಕಳ ತೀವ್ರ ನಿಗಾ ಘಟಕ ಪ್ರಾರಂಭಿಸಲಾಗಿದೆ.ಇದೇ ರೀತಿ ತಾಲ್ಲೂಕು ಆಸ್ಪತ್ರೆ ಅಗತ್ಯವಿರುವ ಆಮ್ಲಜನಕದ ಸಿಲಿಂಡರ್ ಗಳು ಹಾಗೂ ವೆಂಟಿಲೇಟರ್ ಪೂರೈಸಲು ಕ್ರಮವಹಿಸಲಾಗಿದೆ ಎಂದರು.

ಕೋವಿಡ್ -19 ನಿಂದ ಮೃತಪಟ್ಟವರಿಗೆ ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ಬಿಪಿಎಲ್ಕುಟುಂಬ ಸದಸ್ಯರ ಆರೋಗ್ಯ ಇಲಾಖೆ, ಸಂಖ್ಯಾ ಸಂಗ್ರಹಣ ಇಲಾಖೆ ಹಾಗೂ ಕಂದಾಯಇಲಾಖೆಯ ಮೂಲಕ ಮೊದಲನೇ ಹಂತದಲ್ಲಿ ಡಿಸೆಂಬರ್ 2020 ರ ವರೆಗೂ ಅಂಕಿ ಅಂಶಗಳನ್ನುಕ್ರೋಢಿಕರಿಸಲಾಗುತ್ತಿದ್ದು, ಶೀಘ್ರ ವರದಿ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಎಲ್ಲರಿಗೂ ಲಸಿಕೆ ನೀಡುವುದರಿಂದ ಮೂರನೇ ಅಲೆ ತಡೆಗಟ್ಟಬಹುದು. ಆದ್ದರಿಂದಹೆಚ್ಚಿನ ಪ್ರಮಾಣದ ಲಸಿಕೆಯನ್ನು ಸರಬರಾಜು ಮಾಡುವಂತೆ ಸರ್ಕಾರಕ್ಕೆ ಮನವಿಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮಳೆ ಹಾನಿಯಿಂದ 6 ಮನೆಗಳು ಪೂರ್ಣ ಹಾಗೂ 78 ಮನೆಗಳು ಭಾಗಶಃಹಾನಿಯಾಗಿದೆ. ಎಸ್‌ಡಿಆರ್‌ಎಫ್‌ ನಿಧಿಯಲ್ಲಿ ಪರಿಹಾರಕ್ಕೆ ಸೂಚಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT