ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆ ಕಾರ್ಮಿಕ ಪದ್ಧತಿ ಕೈ ಬಿಡಲು ಒತ್ತಾಯ

ಡಿ.ಸಿ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ
Last Updated 10 ಮಾರ್ಚ್ 2022, 15:43 IST
ಅಕ್ಷರ ಗಾತ್ರ

ಹಾಸನ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸಮಾಡುತ್ತಿರುವ ನೌಕರರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿಸಿಐಟಿಯು ನೇತೃತ್ವದಲ್ಲಿ ರಾಜ್ಯ ಮುನ್ಸಿಪಲ್‌ ಕಾರ್ಮಿಕ ಸಂಘ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಗಳಲ್ಲಿ ಗುತ್ತಿಗೆ, ಹೊರ ಗುತ್ತಿಗೆಯಲ್ಲಿದುಡಿಯುತ್ತಿರುವ ಪೌರ ಕಾರ್ಮಿಕರು, ಲೋಡರ್‌ಗಳು, ನೀರುಗಂಟಿ, ಕಸದಅಟೋ ಚಾಲಕರು, ಕಂಪ್ಯೂಟರ್ ಅಪರೇಟರ್‌ಗಳು, ಯು.ಜಿ.ಡಿ ಕಾರ್ಮಿಕರು, ಕಚೇರಿ ಸಹಾಯಕರನ್ನು ಕಾಯಂ ಗೊಳಿಸಬೇಕು. ಕೋವಿಡ್ ಸಂಕಷ್ಟದಲ್ಲಿನಾಗರಿಕರಿಗೆ ಅಗತ್ಯ ಸೇವೆ ನೀಡಲು ಈ ಎಲ್ಲಾ ಕಾರ್ಮಿಕರು ತಮ್ಮ ಜೀವದಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ ಎಂದು ಪ್ರತಿಭಟನಕಾರರು ಹೇಳಿದರು.

ಹಲವು ವರ್ಷಗಳಿಂದ ಸೇವೆಯಲ್ಲಿರುವ ಕಾರ್ಮಿಕರಿಗೆ ಸೇವಾಭದ್ರತೆ, ಸಾಮಾಜಿಕ ಭದ್ರತೆ ಇಲ್ಲ. ಕಾರ್ಮಿಕರನ್ನು ಕಾಯಂ ಮಾಡುವಂತೆಮನವಿ ಸಲ್ಲಿಸಿದರೂ ಸರ್ಕಾರ ಕಡೆಗಣಿಸಿದೆ ಎಂದು ಆರೋಪಿಸಿದರು.

ಗುತ್ತಿಗೆ ಕಾರ್ಮಿಕ ಪದ್ಧತಿ ಕೈ ಬಿಟ್ಟು, ನೌಕರರಿಗೆ ಕನಿಷ್ಠ ₹ 25 ಸಾವಿರ ಮಾಸಿಕೆವೇತನ ನಿಗದಿ ಮಾಡಬೇಕು. ಕಾಯಂಗೊಳಿಸುವ ತನಕ ಎಲ್ಲಾ ಕಾರ್ಮಿಕರಿಗೆನೇರ ಪಾವತಿಯಡಿ ಸಂಬಳ ನೀಡಬೇಕು. ಸುಪ್ರೀಂ ಕೋರ್ಟ್‌ ತೀರ್ಪಿನಂತೆಎಲ್ಲಾ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು.ಪೌರಕಾರ್ಮಿಕರು, ಲೋಡರ್ ಹೆಲ್ಪರ್ಸ್, ಕಸ ಸಾಗಿಸುವ ವಾಹನ ಚಾಲಕರು,ಸಹಾಯಕರು ಮತ್ತು ಯು.ಜಿ.ಡಿ ಕಾರ್ಮಿಕರನ್ನು ಸಫಾಯಿ ಕರ್ಮಚಾರಿಗಳೆಂದುಪರಿಗಣಿಸಬೇಕು ಎಂದು ಆಗ್ರಹಿಸಿದರು.

ನಗರದ ಜನಸಂಖ್ಯೆ ಆಧಾರದಲ್ಲಿ ಪೌರಕಾರ್ಮಿಕರ ಸಂಖ್ಯೆ ನಿಗದಿಪಡಿಸಬೇಕು.ಸರ್ಕಾರದ ಗೃಹಭಾಗ್ಯ ಯೋಜನೆಯಡಿ ಉಚಿತ ನಿವೇಶನ ನೀಡಿ ವಸತಿನಿರ್ಮಿಸಿಕೊಡಬೇಕು.ಸಮವಸ್ತ್ರ ಮತ್ತು ಸುರಕ್ಷತಾ ಸಲಕರಣೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಮುಖಂಡ ಪೃಥ್ವಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT