ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಸಚಿವ ಬಿ.ಡಿ. ಬಸವರಾಜು ನಿಧನ

Last Updated 22 ಮಾರ್ಚ್ 2021, 17:41 IST
ಅಕ್ಷರ ಗಾತ್ರ

ಸಕಲೇಶಪುರ: ಮಾಜಿ ಸಚಿವ ಬಿ.ಡಿ.ಬಸವರಾಜು (85) ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪತ್ನಿ ಸುಮಂಗಲಾ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಹುಟ್ಟೂರು ಬಾಳ್ಳುಪೇಟೆಯಲ್ಲಿ ಅಂತ್ಯಕ್ರಿಯೆ ನೆರವೇರಿತು.

ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದ ಬಸವರಾಜು, ಎಸ್.ಆರ್.ಬೊಮ್ಮಾಯಿ ಸಚಿವ ಸಂಪುಟದಲ್ಲಿ ಕೇವಲ ಎರಡು ದಿನ ಉನ್ನತ ಶಿಕ್ಷಣ ಸಚಿವರಾಗಿದ್ದರು.
ಸಕಲೇಶಪುರಕ್ಕೆ ಬಿ.ಇಡಿ ಕಾಲೇಜು ಹಾಗೂ ಪ್ರಥಮ ದರ್ಜೆ ಕಾಲೇಜು ಮಂಜೂರು ಮಾಡಿಸಿದ ಕೀರ್ತಿಗೆ
ಪಾತ್ರರಾಗಿದ್ದರು.

ಜನತಾ ಪಕ್ಷದಿಂದ ಸ್ಪರ್ಧೆ ಮಾಡಿ 1985 ರಿಂದ 1989ರ ವರೆಗೆ ಸಕಲೇಶಪುರ–ಆಲೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 1989, 1994ರಲ್ಲಿ ಜನತಾ ದಳದಿಂದ ಹಾಗೂ 2004ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡರು. 1999 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಸನ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT