ಮಂಗಳವಾರ, ಮಾರ್ಚ್ 2, 2021
19 °C
ದೂರು ದಾಖಲು

ರಾಜಕೀಯ ವೈಷಮ್ಯದಿಂದ ಕೊಲೆ: ಕಲ್ಲು, ಹಗ್ಗದಿಂದ ಕಟ್ಟಿದ ಶವ ಬಾವಿಯಲ್ಲಿ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಳೆನರಸೀಪುರ: ತಾಲ್ಲೂಕಿನ ಮಾರಗೌಡನಹಳ್ಳಿ ಗ್ರಾಮದ ಬಾವಿಯಲ್ಲಿ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಅದೇ ಗ್ರಾಮದ ಎಂ.ಎನ್. ಮೂರ್ತಿ (50) ಅವರ ಶವ ಎಂದು ಗುರುತಿಸಲಾಗಿದೆ. ಮೃತದೇಹದ ಕುತ್ತಿಗೆ, ಕಾಲು ಮತ್ತು ಸೊಂಟಕ್ಕೆ ಹಗ್ಗ ಬಿಗಿದು, ಕಲ್ಲು ಕಟ್ಟಿ ಬಾವಿಯಲ್ಲಿ ಹಾಕಿದ್ದಾರೆ.  ಇದು ಕೊಲೆ ಎಂದು ಮೃತರ ಸಹೋದರ ಎಂ.ಎನ್. ನೀಲಕಂಠ ದೂರು ದಾಖಲಿಸಿದ್ದಾರೆ.

ಭಾನುವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಅಣ್ಣನಿಗೆ ಯಾರೋ ಕರೆ ಮಾಡಿದ್ದರು. ಜಮೀನಿನಲ್ಲಿ ಇರುವುದಾಗಿ ತಿಳಿಸಿದ್ದರು. ಆದರೆ, ರಾತ್ರಿಯಾದರೂ ಮನೆಗೆ ಬರಲಿಲ್ಲ, ಹುಡುಕಾಡಿದರೂ ಸಿಕ್ಕಿರಲಿಲ್ಲ. ಸೋಮವಾರ ಬೆಳಿಗ್ಗೆ ಗ್ರಾಮದ ಕೆರೆ ಪಕ್ಕದ ಬಾವಿಯಲ್ಲಿ ಮೃತದೇಹವಿದೆ ಎಂದು ಗ್ರಾಮಸ್ಥರು ತಿಳಿಸಿದರು. ನಾವೆಲ್ಲಾ ಹೋಗಿ ನೋಡಿದಾಗ ಅದು ನನ್ನ ಅಣ್ಣನದ್ದೇ ಎಂದು ಗೊತ್ತಾಯಿತು ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ಎ. ರಾಘವೇಂದ್ರ ಅವರೊಂದಿಗೆ ಮೂರ್ತಿಯ ಸಹೋದರ ಗುರುತಿಸಿಕೊಂಡು ಪ್ರಚಾರ ಮಾಡಿದ್ದರು. ಗೆದ್ದ ನಂತರ ರಾಘವೇಂದ್ರ ಪಟಾಕಿ ಹೊಡೆಯುವ ಸಂದರ್ಭದಲ್ಲಿ ಜೆಡಿಎಸ್ ಬೆಂಬಲಿಗರ ನಡುವೆ ಗಲಾಟೆ ನಡೆದು, ಎರಡೂ ಪಕ್ಷದವರೂ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಿದ್ದಾರೆ.

ಮೃತ ಮೂರ್ತಿ ಹಾಗೂ ಕುಟುಂಬದವರು ಬೆಂಗಳೂರಿನಲ್ಲಿ ವಾಸ ಇದ್ದು ಆಗಾಗ ಊರಿಗೆ ಬಂದು ಹೋಗುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ಗ್ರಾಮಾಂತರ ಠಾಣೆ ಎಸ್.ಐ. ವಿನಯ್‍ಕುಮಾರ್ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು