ಶನಿವಾರ, ಜುಲೈ 31, 2021
20 °C
₹500 ಕೋಟಿ ವೆಚ್ಚ, 2023ಕ್ಕೆ ಕಾರ್ಯಾರಂಭ ನಿರೀಕ್ಷೆ

ಹಾಸನ: ಮೆಗಾ ಡೇರಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ನಗರದ ಕೈಗಾರಿಕಾ ಪ್ರದೇಶದ ಕೌಶಿಕ ಬಳಿ ಮೆಗಾ ಡೇರಿ ನಿರ್ಮಾಣಕ್ಕೆ ಹಾಸನ ಹಾಲು ಒಕ್ಕೂಟದ ಅಧ್ಯಕ್ಷ, ಶಾಸಕ ಎಚ್‌.ಡಿ.ರೇವಣ್ಣ ಮತ್ತು ಭವಾನಿ ರೇವಣ್ಣ ಅವರು ಭಾನುವಾರ ಭೂಮಿಪೂಜೆ ನೆರವೇರಿಸಿದರು.

ಹಾಸನ ಹಾಲು ಒಕ್ಕೂಟದಲ್ಲಿ ಪ್ರತಿ ವರ್ಷ ಹಾಲಿನ ಶೇಖರಣೆ  ಶೇ 10 ರಿಂದ 15 ರಷ್ಟು ಹೆಚ್ಚಳವಾಗುತ್ತಿದ್ದು, ಈ ಹಾಲನ್ನು ಲಾಭದಾಯಕ ರೀತಿಯಲ್ಲಿ ಸಂಸ್ಕರಿಸಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ನಗರದ ಕೈಗಾರಿಕಾ ಪ್ರದೇಶದ 57.38 ಎಕರೆ ವಿಸ್ತೀರ್ಣದಲ್ಲಿ 10 ಲಕ್ಷ ಲೀಟರ್‌ ಸಾಮರ್ಥ್ಯದ ಮೆಗಾ ಡೇರಿ ನಿರ್ಮಾಣ ಮಾಡಲಾಗುತ್ತಿದೆ.

60 ಮೆಟ್ರಿಕ್‌ ಟನ್‌ ಹಾಲಿನ ಪುಡಿ ತಯಾರಿಕಾ ಘಟಕ ಹಾಗೂ ಹಾಲಿನ ಉತ್ಪನ್ನಗಳ ತಯಾರಿಕೆ ಮತ್ತು ರೀಟೆಲ್‌ ಪ್ಯಾಕಿಂಗ್‌ ವ್ಯವಸ್ಥೆಯೂ ಈ ಮೆಗಾ ಡೇರಿಯಲ್ಲಿ ಇರಲಿದೆ.

ಮೆಗಾ ಡೇರಿಯ ಸಮುಚ್ಚಯ ನಿರ್ಮಾಣ, ಗೋದಾಮು, ಯಂತ್ರೋಪಕರಣಗಳ ಸರಬರಾಜು ಮತ್ತು ಅಳವಡಿಕೆ ಸೇರಿದಂತೆ ಒಟ್ಟಾರೆ ಯೋಜನಾ ವೆಚ್ಚ ₹500 ಕೋಟಿ ಎಂದು ಅಂದಾಜಿಸಲಾಗಿದೆ. ಈ ಯೋಜನೆ ಪೂರ್ಣಗೊಳ್ಳಲು 2 ವರ್ಷ ಕಾಲಾವಧಿ ನಿಗದಿ ಪಡಿಸಿದ್ದು, 2023ರ ಅಂತ್ಯಕ್ಕೆ ಕಾರ್ಯಾರಂಭ ಮಾಡಲಿದೆ.

ಸಿವಿಲ್‌ ಕಾಮಗಾರಿಗಳ ಮೊದಲ ಹಂತದ ಕಾಮಗಾರಿಗಳಿಗೆ ಕೆ.ಎಂ.ಎಫ್‌ ಮುಖಾಂತರ ಟೆಂಡರ್‌ ಪ್ರಕ್ರಿಯೆ ನಡೆದಿದ್ದು, ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ.

ಮೆಗಾ ಡೇರಿಯಿಂದ ಒಕ್ಕೂಟದ ಹೆಚ್ಚುವರಿ ಹಾಲಿನಿಂದ ಹಾಲಿನ ಪುಡಿ ಮತ್ತು ಬೆಣ್ಣೆ ಪರಿವರ್ತನೆ ಇಲ್ಲಿಯೇ ಆಗುವುದರಿಂದ ಹಾಲಿನ ಸಾಗಾಣಿಕಾ ವೆಚ್ಚ ಮತ್ತು ಉತ್ಪನ್ನಗಳ ದಾಸ್ತಾನು ವೆಚ್ಚದಲ್ಲಿ ಮತ್ತು ಪರಿವರ್ತನಾ ವೆಚ್ಚದಲ್ಲಿ ಒಕ್ಕೂಟಕ್ಕೆ ಕೋಟ್ಯಂತರ ರೂಪಾಯಿ ಉಳಿತಾಯ ಆಗಲಿದೆ. ಉಳಿತಾಯದ ಹಣವನ್ನು ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರಿಗೆ ಹಾಲಿನ ಖರೀದಿ ದರ ಹೆಚ್ಚಿಸಲು ಅನುಕೂಲವಾಗಲಿದೆ ಎಂದು ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ಗೋಪಾಲಯ್ಯ ಮಾಹಿತಿ ನೀಡಿದರು.

ಜೆಡಿಎಸ್‌ ಮುಖಂಡ ಹೊನ್ನವಳ್ಳಿ ಸತೀಶ್‌ ಹಾಗೂ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು