ಹಾಸನ: ದಿವ್ಯಾಂಗರಿಗೆ ನೆರವಾಗುವ ಉದ್ದೇಶದಿಂದ ಏ.10 ರಿಂದ 12ರವರೆಗೆ ಉಚಿತ ಕೃತಕ ಕೈ-ಕಾಲು ಜೋಡಣೆ ಮಾಡುವ ಬೃಹತ್ ಶಿಬಿರವನ್ನು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಹಾಸನ ಹೊಯ್ಸಳ ಸಂಸ್ಥೆಯ ಮೋಹನ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಂ. ಬೈಪಾಸ್ ರಸ್ತೆಯಲ್ಲಿರುವ ರಾಜೀವ್ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆವರಣದಲ್ಲಿ ಶಿಬಿರ ಆಯೋಜಿಸಲಾಗುತ್ತಿದೆ. ದಿವ್ಯಾಂಗರಿಗೆ ಸ್ಥಳದಲ್ಲಿಯೇ ವೈದ್ಯಕೀಯ ಪರೀಕ್ಷೆ ನಡೆಸಿ, ಅಗತ್ಯವಿರುವ ಕೃತಕ ಕಾಲುಗಳನ್ನು ತಯಾರಿಸಿ ಉಚಿತವಾಗಿ ನೀಡಲಾಗುತ್ತದೆ ಎಂದು ಹೇಳಿದರು.

ಶಿಬಿರದಲ್ಲಿ ಕೃತಕ ಕೈಗಳು (ಮುಂಗೈ) ಹಾಗೂ ಪೋಲಿಯೊ ಪೀಡಿತರಿಗಾಗಿ ಕ್ಯಾಲಿಪರ್ಸ್ಗಳನ್ನೂ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು. ಹೊರ ಜಿಲ್ಲೆಗಳಿಂದ ಬರುವ ಫಲಾನುಭವಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಈ ಬಾರಿ ಸುಮಾರು 400ಕ್ಕೂ ಹೆಚ್ಚು ಫಲಾನುಭವಿಗಳಿಗೆ ಈ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದರು.

ರೋಟರಿ ಸಂಸ್ಥೆ ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು, ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮ ನಡೆಸುತ್ತ ಬಂದಿದೆ. ಭಾರತದಲ್ಲಿ ರೋಟರಿ ಸಂಸ್ಥೆಗೆ 120 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ರೋಟರಿ ಕ್ಲಬ್ ಹಾಸನ ಹೊಯ್ಸಳ, ರಾಜೀವ್ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಮಲ್ನಾಡ್ ಎಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಘಟಕ, ರೋಟರಿ ಬೆಂಗಳೂರು ಸೌತ್ ಪೆರೇಡ್, ರೋಟರಿ ಬೆಂಗಳೂರು ಲೇಕ್ಸೈಡ್, ಜೈಪುರದ ಭಗವಾನ್ ಮಹಾವೀರ್ ವಿಕಲಾಂಗ ಸಹಾಯತಾ ಸಮಿತಿ, ಇನ್ನರ್ ವೀಲ್ ಕ್ಲಬ್ ಆಫ್ ಹಾಸನ ಹೊಯ್ಸಳ ವೈಸಿರಿ, ಇನ್ನರ್ ವೀಲ್ ಕ್ಲಬ್ ಆಫ್ ಹಾಸನ ಗೋಲ್ಡ್ ಹಾಗೂ ಭಾರತ ಸೇವಾ ದಳ ಆಶ್ರಯದಲ್ಲಿ ಶಿಬಿರ ನಡೆಯಲಿದೆ ಎಂದು ತಿಳಿಸಿದರು.

ಆಸಕ್ತರು ಮೊ.ಸಂ. 9844046527, 9449644267 ಮತ್ತು 9448450681 ಮೂಲಕ ಸಂಪರ್ಕಿಸಬಹುದಾಗಿದೆ ಎಂದರು.

ವಿಜಯಕುಮಾರ್, ಡಾ. ರವಿಕುಮಾರ್, ಸೋಮೇಶ್, ರಾಣಿ, ವಿನೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.