ಬೇಲೂರು: ಕಾವೇರಿ ಕ್ಲಿನಿಕ್, ಲಯನ್ಸ್ ಕ್ಲಬ್, ಚಿಕ್ಕಮಗಳೂರಿನ ಕೆಆರ್ಎಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಹಾಸನದ ಎಂಎಂಎಂ ಆಸ್ಪತ್ರೆ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಭಾನುವಾರ ಪಟ್ಟಣದ ಕಾವೇರಿ ಕ್ಲಿನಿಕ್ ಮುಂಭಾಗ ಆಯೋಜಿಸಲಾಗಿತ್ತು.

ಉದ್ಘಾಟಿಸಿ ಮಾತನಾಡಿದ ಕಾವೇರಿ ಕ್ಲಿನಿಕ್ ವೈದ್ಯಾಧಿಕಾರಿ, ಲಯನ್ಸ್ ಸಂಸ್ಥೆಯ ಮಾಜಿ ಅಧ್ಯಕ್ಷ ಡಾ. ಚಂದ್ರಮೌಳಿ, ಲಯನ್ಸ್ ಸಂಸ್ಥೆ 14 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದು, ಸಾರ್ವಜನಿಕರಿಗೆ ಉಪಯೋಗ ಆಗುವಂತಹ ಹಲವಾರು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ ಎಂದರು.

ವಿಶೇಷವಾಗಿ ಆರೋಗ್ಯ ತಪಾಸಣಾ ಶಿಬಿರಗಳಂತಹ ಕಾರ್ಯಕ್ರಮಗಳು ಗ್ರಾಮೀಣ ಹಾಗೂ ಪಟ್ಟಣದ ಜನರಿಗೆ ಪ್ರಯೋಜನಕಾರಿಯಾಗಿವೆ. ಗ್ರಾಮೀಣ ಭಾಗದ ಜನರು ದೂರದ ಊರುಗಳಿಗೆ ತೆರಳಿ ದೊಡ್ಡ ಆಸ್ಪತ್ರೆಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಕಷ್ಟಕರವಾಗುತ್ತದೆ. ಈ ಸಮಸ್ಯೆಯನ್ನು ಮನಗಂಡು ಲಯನ್ಸ್ ಸಂಸ್ಥೆಯೊಂದಿಗೆ ಚರ್ಚಿಸಿ ವೈದ್ಯರನ್ನು ಆಹ್ವಾನಿಸಿ ಇಲ್ಲಿಯೇ ತಪಾಸಣೆ ನಡೆಸುವ ವ್ಯವಸ್ಥೆ ಮಾಡಲಾಗಿದೆ ಎಂದರು.

ರೋಗಿಗಳಿಗೆ ಸೂಕ್ತ ಸಲಹೆ ನೀಡಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಸಂಬಂಧಿತ ಆಸ್ಪತ್ರೆಗಳ ವಿಳಾಸ ಹಾಗೂ ಮಾಹಿತಿ ನೀಡಲಾಗುತ್ತದೆ. ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಲಯನ್ಸ್ ಸಂಸ್ಥೆಯ ಅಧ್ಯಕ್ಷೆ ತಾರಾಮಣಿ ಸುರೇಶ್ ಮಾತನಾಡಿ, ಈ ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಹೃದಯ ರೋಗ, ಮಕ್ಕಳ ಆರೋಗ್ಯ ತಪಾಸಣೆ, ಮೂಳೆ ಮತ್ತು ಕೀಲು ಸಮಸ್ಯೆಗಳು, ಸ್ತ್ರೀರೋಗ, ನರರೋಗ ಹಾಗೂ ಕಣ್ಣಿನ ರೋಗಗಳ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಶಿಬಿರದಲ್ಲಿ ಡಾ. ಗುರುಪ್ರಸಾದ್ ಬಾಣೂರು, ಡಾ.ಎಂ. ಉಮೇಶ್, ಡಾ. ಎಸ್.ಕೆ. ಅವಿನಾಶ್, ಡಾ. ಜಿ.ಆರ್. ಲೀಲಾ, ಡಾ. ಚಂದ್ರಮೌಳಿ, ಡಾ. ಬಿ.ಕೆ. ಮನೋಜ್ ಕುಮಾರ್ ಹಾಗೂ ಆಫ್ತಾಲ್ಮಿಕ್ ಅಧಿಕಾರಿ ಕೆ.ಒ. ಆದರ್ಶ ಅವರು, ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಸಲಹೆ ನೀಡಿದರು.

ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಸಂತೋಷ್, ಖಜಾಂಚಿ ಆದರ್ಶ್, ಸುರೇಶ್, ಅಬ್ದುಲ್ ಲತೀಫ್, ಕೆ.ಎಲ್. ಸುರೇಶ್, ಮಂಜುನಾಥ್, ಹೇಮಂತ್, ಡಾ. ರೋಹನ್, ಮುಕ್ತಾರ್ ಅಹಮದ್, ಪೂವಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುಮಾರು 250ಕ್ಕೂ ಹೆಚ್ಚು ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.