ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ ಜಿಲ್ಲೆ ರಾಜ್ಯಕ್ಕೆ ಮಾದರಿ: ಹಿಮ್ಸ್‌ ವೈದ್ಯಕೀಯ ಅಧೀಕ್ಷಕ ಡಾ. ಕೃಷ್ಣಮೂರ್ತಿ

ಗರ್ಭಕೊರಳಿನ ಕ್ಯಾನ್ಸರ್‌ ತಡೆಗೆ ಉಚಿತ ಲಸಿಕೆ: ಮೆಚ್ಚುಗೆ
Last Updated 16 ಫೆಬ್ರುವರಿ 2023, 4:23 IST
ಅಕ್ಷರ ಗಾತ್ರ

ಹಾಸನ: ಮೊದಲೇ ನಿಗದಿತ ಲಸಿಕೆ ಪಡೆದರೆ, ಗರ್ಭಕೊರಳಿನ ಕ್ಯಾನ್ಸರ್‌ ಅನ್ನು ತಡೆಯಲು ಸಾಧ್ಯವಿದೆ ಎಂದು ಹಿಮ್ಸ್‌ ವೈದ್ಯಕೀಯ ಅಧೀಕ್ಷಕ ಡಾ. ಕೃಷ್ಣಮೂರ್ತಿ ಹೇಳಿದರು.

ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜೀವನಾಶ್ರಯ ಸೇವಾ ಸಂಸ್ಥೆ, ಹಾಸನ ಭಾರತೀಯ ಸ್ತ್ರೀ ರೋಗ ಹಾಗೂ ಪ್ರಸೂತಿ ತಜ್ಞರ ಸಂಘ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕಗಳ ಆಶ್ರಯದಲ್ಲಿ ಈಚೆಗೆ ನಡೆದ ಎಚ್ಐವಿ ಸೋಂಕಿತ ಮಕ್ಕಳಿಗೆ ಉಚಿತ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೊದಲೇ ಲಸಿಕೆ ಪಡೆದರೆ ಸೋಂಕಿನಿಂದ ದೂರವಿರಬಹುದು ಎಂಬುದಾದರೆ, ಅದು ಗರ್ಭಕೊರಳಿನ ಕ್ಯಾನ್ಸರ್ ಮಾತ್ರ. ಈ ಲಸಿಕೆಗೆ ಸ್ವಲ್ಪ ಹಣ ಖರ್ಚುದರೂ ಭಾರತೀಯ ರೆಡ್ ಕ್ರಾಸ್‌ ಸಹಾಯದಿಂದ ಹಾಸನ ಜಿಲ್ಲಾ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ ಸಂಘದ ವತಿಯಿಂದ ಜಿಲ್ಲೆಯಲ್ಲಿ ಸುಮಾರು 30 ಜನ ಎಚ್ಐವಿ ಸೊಂಕಿತ ಮತ್ತು ಬಾಧಿತ ಮಕ್ಕಳಿಗೆ ಉಚಿತವಾಗಿ ಲಸಿಕೆ ನೀಡುತ್ತಿರುವುದು ರಾಜ್ಯದಲ್ಲೆ ಮಾದರಿ ಕಾರ್ಯಕ್ರಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆಯ ಅಧ್ಯಕ್ಷ ಹೆಮ್ಮಿಗೆ ಮೋಹನ್ ಮಾತನಾಡಿ, ಈಗಾಗಲೇ ಸೋಂಕಿಗೆ ತುತ್ತಾಗಿರುವ ಮಕ್ಕಳಿಗೆ ಜೀವನ ಪೂರ್ತಿ ಗರ್ಭ ಕೊರಳಿನ ಕ್ಯಾನ್ಸರ್ ಬರದಂತೆ ತಡೆಯಲು ಸಾಧ್ಯವಿದ್ದು, ಅದಕ್ಕಾಗಿ ಜಿಲ್ಲಾ ಸ್ತ್ರೀ ರೋಗ ತಜ್ಞರ ಸಂಘದಿಂದ ನೀಡುವ ಲಸಿಕೆಗೆ ತಗುಲುವ ವೆಚ್ಚವನ್ನ ರೆಡ್‌ಕ್ರಾಸ್‌ನಿಂದ ಭರಿಸುವ ಭರವಸೆ ನೀಡಲಾಯಿತು ಎಂದು ಹೇಳಿದರು.

ಈ ಕಾರ್ಯಕ್ರಮಕ್ಕೆ ಹಾಸನ ಶಾಸಕ ಪ್ರೀತಂ ಗೌಡರು ಕೈಜೋಡಿಸಿದ್ದು, ಮೊದಲ ಹಂತದ ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಗಿದೆ. ಎರಡನೇ ಹಂತದ ಲಸಿಕೆ ಕಾರ್ಯಕ್ರಮ ಈಗ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕ್ಯಾನ್ಸರ್ ಜಾಗೃತಿ, ಉಚಿತ ತಪಾಸಣಾ ಕಾರ್ಯಕ್ರಮಗಳನ್ನು ಕ್ಷೇತ್ರಮಟ್ಟದಲ್ಲಿ ಆಯೋಜಿಸಲು ರೆಡ್ ಕ್ರಾಸ್ ಸಂಸ್ಥೆ ಯೋಜನೆ ರೂಪಿಸುತ್ತಿದೆ ಎಂದು ತಿಳಿಸಿದರು.

ಹಾಸನ ಜಿಲ್ಲಾ ಸ್ತ್ರೀ ಮತ್ತು ಪ್ರಸೂತಿ ತಜ್ಞರ ಸಂಘದ ಡಾ. ಸಾವಿತ್ರಿ, ಜಿಲ್ಲಾ ಮೇಲ್ವಿಚಾರಕ ರವಿಕುಮಾರ್ ಮಾತನಾಡಿದರು. ಡಾ.ಭಾರತಿ ರಾಜಶೇಖರ್ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಡಾ.ವೈ.ಎಸ್. ವೀರಭದ್ರಪ್ಪ, ಕಾರ್ಯದರ್ಶಿ ಶಬೀರ್ ಅಹ್ಮದ್, ಖಜಾಂಚಿ ಜಯೇಂದ್ರ ಕುಮಾರ್, ನಿರ್ದೇಶಕರಾದ ಡಾ. ಸಾವಿತ್ರಿ, ಅಮ್ಜದ್ ಖಾನ್, ಬನ್ಸಾಲಿ, ಜಯಶ್ರೀ, ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿಯಾದ ಡಾ.ಸಂಧ್ಯಾ, ರೆಡ್ ಕ್ರಾಸ್ ಸಂಸ್ಥೆಯ ಚಂದನ್, ಹರ್ಷಿತ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT