ಹಾಸನ: ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಗಳನ್ನು ನಿರಂತರವಾಗಿ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಬದುಕನ್ನು ದುಸ್ತರಗೊಳಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಮಂಜುನಾಥ್ ಶರ್ಮಾ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದಿಂದಾಗಿ ಜನರು ದಿನನಿತ್ಯದ ಖರ್ಚು ನಿರ್ವಹಿಸಲು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ದೂರಿದರು.

ಅಚ್ಛೆ ದಿನ್ ತರಲಾಗುತ್ತದೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ, ಜನರಿಗೆ ನಿರೀಕ್ಷಿತ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಪ್ರತಿದಿನ ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್ಜಿ ದರ ಏರಿಕೆ ಆಗುತ್ತಿರುವುದರಿಂದ ಸಾರಿಗೆ ವೆಚ್ಚ ಹೆಚ್ಚಿದ್ದು, ಅದರ ಪರಿಣಾಮವಾಗಿ ಅಗತ್ಯ ವಸ್ತುಗಳ ಬೆಲೆ ಸಹ ಏರಿಕೆಯಾಗಿದೆ ಎಂದರು.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವನ್ನು ನೆಪವನ್ನಾಗಿ ಮಾಡಿ ಕೊಂಡು ಇಂಧನ ದರ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಸರಿಯಲ್ಲ ಎಂದು ಟೀಕಿಸಿದರು.

ಇಂಧನ ದರ ಏರಿಕೆಯಿಂದ ರೈತರು, ಕಾರ್ಮಿಕರು, ಮಧ್ಯಮ ವರ್ಗದ ಜನರು ಹಾಗೂ ಸಣ್ಣ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರ ತಕ್ಷಣ ಇಂಧನ ಮೇಲಿನ ತೆರಿಗೆ ಕಡಿತಗೊಳಿಸಿ ಜನರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-36-317191198

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.