ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅತ್ಯಾಚಾರ ಆರೋಪ ಪ್ರಕರಣ | ಜೈಲಿನಿಂದ ದೇವರಾಜೇಗೌಡ ಬಿಡುಗಡೆ

ಜಾಮೀನು ಮಂಜೂರು ಮಾಡಿದ ಹೈಕೋರ್ಟ್
Published 2 ಜುಲೈ 2024, 15:38 IST
Last Updated 2 ಜುಲೈ 2024, 15:38 IST
ಅಕ್ಷರ ಗಾತ್ರ

ಹಾಸನ: ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ವಕೀಲ, ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಅವರಿಗೆ ಹೈಕೋರ್ಟ್‌ ಸೋಮವಾರ ಜಾಮೀನು ಮಂಜೂರು ಮಾಡಿದ್ದು, ಮಂಗಳವಾರ ಇಲ್ಲಿನ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ವಕೀಲನಾಗಿ ನ್ಯಾಯಾಂಗದ ವ್ಯವಸ್ಥೆಗೆ ತಲೆ ಬಾಗುವೆ. ತನಿಖೆಗೆ ಸಹಕರಿಸಿದ್ದೇನೆ. ನಾನು ರಾಜಕಾರಣಿಯಾಗಿರುವುದರಿಂದ ರಾಜಕೀಯವೂ ಇರುತ್ತದೆ. ಪ್ರಕರಣದಲ್ಲಿ ಯಾರಿದ್ದಾರೆ‌ ಎಂಬುದು ಹೊರ ಬರುತ್ತದೆ. ಸತ್ಯಕ್ಕೆ ಜಯವಿದೆ. ಪ್ರಕರಣದಿಂದ ಮುಕ್ತಗೊಳ್ಳುವವರೆಗೂ ಯಾವುದೇ ಪ್ರತಿಕ್ರಿಯೆ ಕೊಡಲ್ಲ’ ಎಂದರು.

‘ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದೆನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಹಂಚಿಕೆ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೈವಾಡವಿದೆ’ ಎಂದು ದೇವರಾಜೇಗೌಡ ಆರೋಪಿಸಿದ್ದರು.

ಹೊಳೆನರಸೀಪುರ ಠಾಣೆಯಲ್ಲಿ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರಿಂದ, ಮೇ 10 ರಂದು ಹಿರಿಯೂರು ಬಳಿ ಅವರನ್ನು ಪೊಲೀಸರು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT