ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗಂಡಸಿ: ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Published : 15 ಸೆಪ್ಟೆಂಬರ್ 2024, 12:39 IST
Last Updated : 15 ಸೆಪ್ಟೆಂಬರ್ 2024, 12:39 IST
ಫಾಲೋ ಮಾಡಿ
Comments

ಗಂಡಸಿ: ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಸವಿನೆನಪಿಗಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕರ್ನಾಟಕ ಸಂಭ್ರಮ- 50 ಕನ್ನಡ ಜ್ಯೋತಿ ರಥಯಾತ್ರೆ ಭಾನುವಾರ ಬೆಳಿಗ್ಗೆ ಇಲ್ಲಿನ ನಾಡ ಕಛೇರಿ, ಗ್ರಾಮ ಪಂಚಾಯಿತಿ, ಕನ್ನಡ ಸಾಹಿತ್ಯ ಪರಿಷತ್‌ ಹೋಬಳಿ ಘಟಕದಿಂದ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.

ಕನ್ನಡಾಂಬೆಯ ಭಾವಚಿತ್ರಕ್ಕೆ ಗಣ್ಯರು ಪೂಜೆ ಸಲ್ಲಿಸಿದ ನಂತರ ಮಹಾದೇವರಹಳ್ಳಿ ವೃತ್ತದಿಂದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದವರೆಗೆ 1 ಕಿ.ಮೀ. ದೂರ ಮಹಿಳೆಯರು ಪೂರ್ಣಕುಂಭ ಹೊತ್ತು ಹೆಜ್ಜೆ ಹಾಕಿದರು. ವಾದ್ಯಗೋಷ್ಠಿಗಳೊಂದಿಗೆ ಮೆರವಣಿಗೆ ನಡೆಸಲಾಯಿತು ನಂತರ ರಥ ಅರಸೀಕೆರೆಯೆತ್ತ ಸಾಗಿತು.

ಗಂಡಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಪಿಡಿಒ ಸುಮಿತ್ರಾ, ಗಂಡಸಿ ರಾಜಸ್ವ ನಿರೀಕ್ಷಕ ನಟೇಶ್, ಸಂಗೊಳ್ಳಿ ರಾಯಣ್ಣ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಅಧ್ಯಕ್ಷ ಜಗದೀಶ್, ಕಸಾಪ ಹೋಬಳಿ ಘಟಕದ ಅಧ್ಯಕ್ಷ ಜಯರಾಮ್, ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ವಿರೂಪಾಕ್ಷಪ್ಪ, ಗ್ರಾ.ಪಂ. ಸದಸ್ಯರು, ಸಿಬ್ಬಂದಿ, ನಾಡ ಕಚೇರಿ ಸಿಬ್ಬಂದಿ, ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಕಸಾಪ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT