ಗುರುವಾರ , ಮೇ 19, 2022
23 °C

ಚಾಕೇನಹಳ್ಳಿ ಸ್ಫೋಟ ಪ್ರಕರಣ: ಮತ್ತೊಬ್ಬ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಹೊಳೆನರಸೀಪುರ ತಾಲ್ಲೂಕಿನ ಚಾಕೇನಹಳ್ಳಿ ಕಟ್ಟೆ ಗ್ರಾಮದ ಸ್ಫೋಟಕ ಸಂಗ್ರಹಿಸುವ ಗೋದಾಮಿನ ಬಳಿ ಭಾನುವಾರ ಜಿಲಿಟಿನ್ ಸ್ಫೋಟಿಸಿ, ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಗುರುವಾರ ಮೃತಪಟ್ಟಿದ್ದಾರೆ.

ಚಾಕೇನಹಳ್ಳಿ ಗ್ರಾಮದ ನಟರಾಜ್ ಅವರು ಬೆಂಗಳೂರಿನ ಆಸ್ಪತ್ರೆಯ ಲ್ಲಿ ಸಾವಿಗೀಡಾಗಿದ್ದಾರೆ. ಇಡೀ ಪ್ರಕರಣದಲ್ಲಿ ಆರೋಪಿಯೂ ಸೇರಿ ಮೂರು ಮಂದಿ ಮೃತಪಟ್ಟಿದ್ದಾರೆ.

ಘಟನೆ ನಡೆದ ದಿನ ಶ್ರವಣಬೆಳಗೊಳ ಹೋಬಳಿಯ ಬೆಟ್ಟದಹಳ್ಳಿ ಗ್ರಾಮದ ಸಂಪತ್ (27) ಸ್ಥಳದಲ್ಲೇ ಮೃತಪಟ್ಟು,  ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದರು.

ನಾಪತ್ತೆಯಾಗಿರುವ ಗೋದಾಮಿನ ಮಾಲೀಕ  ನಾಗೇಶ್ ಪತ್ತೆಗೆ ತಂಡ ರಚಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು