ಬುಧವಾರ, ನವೆಂಬರ್ 20, 2019
22 °C

ಅರಸೀಕೆರೆ: ಸರ್ಕಾರಿ ಆಸ್ಪತ್ರೆಯಲ್ಲಿನ ಜನೌಷಧಿ ಕಳ್ಳತನ

Published:
Updated:
Prajavani

ಅರಸೀಕೆರೆ: ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಬಡವರ ಅನುಕೂಲಕ್ಕಾಗಿ ಸಂಗ್ರಹಿಸಿದ್ದ ಜನೌಷಧಿಗಳನ್ನು ಕಳ್ಳತನ ಮಾಡಲಾಗಿದೆ.

ಶನಿವಾರ ರಾತ್ರಿ ಸುಮಾರು ಒಂದೂವರೆ ಗಂಟೆ ವೇಳೆ ನಗರದ ಸರ್ಕಾರಿ ಆಸ್ಪತ್ರೆಗೆ ನುಗ್ಗಿದ ಕಳ್ಳರು ಕಡಿಮೆ ದರದಲ್ಲಿ ಮಾರಾಟ ಮಾಡಲು ಇಟ್ಟಿದ್ದ ಜನೌಷಧಿ ಮಳಿಗೆಯ ಬೀಗವನ್ನು ಮುರಿದು ಕಳ್ಳತನ ಮಾಡಿದ್ದಾರೆ.

ಅರಸೀಕೆರೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡವರಿಗಾಗಿ ಇರುವ ಜನೌಷಧಿಗಳನ್ನು ಕಳ್ಳತನ ಮಾಡಿರುವ ಆರೋಪಿಗಳನ್ನು ಪೊಲೀಸರು ಶೀಘ್ರವೇ ಬಂಧಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

ಪ್ರತಿಕ್ರಿಯಿಸಿ (+)