ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಮೃತರ ಕುಟುಂಬಕ್ಕೆ ₹5 ಲಕ್ಷ ನೀಡಿ: ಶಾಸಕ ಎಚ್.ಡಿ.ರೇವಣ್ಣ

ಪರಿಹಾರ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೊರೆ: ಶಾಸಕರ ಎಚ್ಚರಿಕೆ
Last Updated 8 ಜೂನ್ 2021, 15:36 IST
ಅಕ್ಷರ ಗಾತ್ರ

ಹಾಸನ: ಕೋವಿಡ್-19 ಕಾಯಿಲೆಯಿಂದ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ₹5 ಲಕ್ಷ ಪರಿಹಾರ ನೀಡಬೇಕು ಎಂದು ಶಾಸಕ ಎಚ್.ಡಿ.ರೇವಣ್ಣಆಗ್ರಹಿಸಿದರು.

ಶಾಸಕರಾದ ಸಿ.ಎನ್.ಬಾಲಕೃಷ್ಣ, ಕೆ.ಎಸ್‌.ಲಿಂಗೇಶ್‌, ಕೆ.ಎಂ.ಶಿವಲಿಂಗೇಗೌಡ ಜತೆಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬೇಜವಾಬ್ದಾರಿತನದಿಂದ 30 ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಕೋವಿಡ್ಕಾಯಿಲೆಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ನಿಯಮ ಪ್ರಕಾರ ಮೃತರಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕು. ಇಲ್ಲವಾದರೆ ಸುಪ್ರೀಂ ಕೋರ್ಟ್‌ನಲ್ಲಿಕೇಂದ್ರದ ವಿರುದ್ಧ ದಾವೆ ಹೂಡಲಾಗುವುದು ಎಂದು ಎಚ್ಚರಿಸಿದರು.

ದೇಶದಲ್ಲಿ ಪ್ರವಾಹದಿಂದ ಯಾರಾದರೂ ಮೃತಪಟ್ಟರೆ ಸರ್ಕಾರ ₹5 ಲಕ್ಷ ಪರಿಹಾರ ನೀಡುತ್ತದೆ. ಅದೇ ರೀತಿ ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್‌)ನಿಂದ ₹5 ಲಕ್ಷ ಹಾಗೂ ರಾಜ್ಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿ(ಎಸ್‌ಡಿಆರ್‌ಎಫ್‌)ನಿಂದ ತಲಾ ₹ 1 ಲಕ್ಷ ಪರಿಹಾರ ನೀಡಬೇಕು. ಬಿಪಿಎಲ್‌ ಕಾರ್ಡ್
ಹೊಂದಿರುವ ಕುಟುಂಬಗಳಿಗೆ ಪರಿಹಾರ ನೀಡಬೇಕು. ಈ ಸಂಬಂಧ ಜಿಲ್ಲೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿದಾಗಲೂ ಗಮನ ಸೆಳೆಯುತ್ತೇವೆ ಎಂದು ತಿಳಿಸಿದರು.

ಕೋವಿಡ್‌ನಿಂದಾಗಿ ರಾಜ್ಯದಲ್ಲಿ ಸಾವಿರಾರು ಕುಟುಂಬಗಳು ಬೀದಿ ಪಾಲಾಗಿವೆ. ಕೂಲಿ ಕಾರ್ಮಿಕರು ಮನೆ ಬಾಡಿಗೆ, ವಿದ್ಯುತ್‌ ಬಿಲ್‌ ಕಟ್ಟಲು ಆಗದೇ ಸಂಕಷ್ಟದಲ್ಲಿದ್ದಾರೆ. ಕೇವಲ₹ 2 ಸಾವಿರ ಸಾಲದು, ಕನಿಷ್ಠ ₹10 ಸಾವಿರ ಧನಸಹಾಯ ಮಾಡಬೇಕು.₹2–3 ಸಾವಿರ ಕೊಟ್ಟು ಕೈ ತೊಳೆದುಕೊಳ್ಳುವುದು ಬೇಡ. ಬಡ ಜನರನ್ನು
ಭಿಕ್ಷುಕರಂತೆ ಸರ್ಕಾರ ಕಾಣುತ್ತಿದ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ತಿಂಗಳಿನಿಂದಲೂ ಸೋಂಕು ಕಡಿಮೆ ಆಗುತ್ತಿಲ್ಲ. ಪಾಸಿಟಿವಿಟಿ ದರ ಸಹಕಡಿಮೆ ಆಗುತ್ತಿಲ್ಲ ಎಂದು ದೂರಿದರು.

ಕೋವಿಡ್‌ ಎರಡನೇ ಆರಂಭದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಹಾಸಿಗೆ, ವೆಂಟಿಲೇಟರ್‌ಸಿಗದೆ ಹಲವು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಖರ್ಚು ಮಾಡಿರುವಹಣದಲ್ಲಿ ಶೇಕಡಾ 50ರಷ್ಟು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೀಡಬೇಕು.ಹಲವರು ಚಿಕಿತ್ಸೆಗಾಗಿ ಮನೆ, ಜಮೀನು, ಒಡವೆ ಮಾರಾಟ ಮಾಡಿದ್ದಾರೆ. ಕಷ್ಟದಲ್ಲಿರುವವರಿಗೆ ಕೈಲಾದಷ್ಟು ಸಹಾಯ ಮಾಡಿದ್ಧೇವೆ ಎಂದುಶಾಸಕರಾದ ಸಿ.ಎನ್‌.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT