ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡೆಗೆ ಆದ್ಯತೆ ನೀಡಿ: ಶಾಸಕ ಸಿ.ಎನ್.ಬಾಲಕೃಷ್ಣ

Published 8 ಫೆಬ್ರುವರಿ 2024, 14:01 IST
Last Updated 8 ಫೆಬ್ರುವರಿ 2024, 14:01 IST
ಅಕ್ಷರ ಗಾತ್ರ

ಶ್ರವಣಬೆಳಗೊಳ: ಶಿಕ್ಷಣದ ಜೊತೆಗೆ ಗೈಡ್‌ಲೈನ್ ವಿದ್ಯಾಸಂಸ್ಥೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕಲೆ ಸಂಸ್ಕೃತಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿರುವುದು ಸಂತಸ ತಂದಿದೆ ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ಗೊಮ್ಮಟ ನಗರದಲ್ಲಿರುವ ಗೈಡ್ ಲೈನ್ ಅಂತರರಾಷ್ಟ್ರೀಯ ಶಾಲಾ ವಾರ್ಷಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಈ ವಿದ್ಯಾಸಂಸ್ಥೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ್ದು, ಜಿಲ್ಲೆಯಲ್ಲಿ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಚಾರ ಎಂದು ಆಡಳಿತ ಮಂಡಳಿಯ ಸದಸ್ಯರನ್ನು ಶ್ಲಾಘಿಸಿದರು.

10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಶ್ರವಣಬೆಳಗೊಳದ ಗೊಮ್ಮಟನಗರದಲ್ಲಿರುವ ಗೈಡ್ ಲೈನ್ ಅಂತರಾಷ್ಟ್ರೀಯ ಶಾಲಾ ವಾರ್ಷಿಕೋತ್ಸವದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು ಈ ಸಂದರ್ಭದಲ್ಲಿ ಕಬ್ಬಾಳು ರಮೇಶ್ ಇದ್ದರು.
ಶ್ರವಣಬೆಳಗೊಳದ ಗೊಮ್ಮಟನಗರದಲ್ಲಿರುವ ಗೈಡ್ ಲೈನ್ ಅಂತರಾಷ್ಟ್ರೀಯ ಶಾಲಾ ವಾರ್ಷಿಕೋತ್ಸವದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು ಈ ಸಂದರ್ಭದಲ್ಲಿ ಕಬ್ಬಾಳು ರಮೇಶ್ ಇದ್ದರು.
ಶ್ರವಣಬೆಳಗೊಳದ ಗೊಮ್ಮಟನಗರದಲ್ಲಿರುವ ಗೈಡ್‌ಲೈನ್ ಅಂತರರಾಷ್ಟ್ರೀಯ ಶಾಲಾ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು
ಶ್ರವಣಬೆಳಗೊಳದ ಗೊಮ್ಮಟನಗರದಲ್ಲಿರುವ ಗೈಡ್‌ಲೈನ್ ಅಂತರರಾಷ್ಟ್ರೀಯ ಶಾಲಾ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT