ಬುಧವಾರ, ಸೆಪ್ಟೆಂಬರ್ 29, 2021
20 °C

ಹಾಸನ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಉತ್ತಮ ಮಳೆಯಾಗಿದೆ. 

ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ 3.30ಕ್ಕೆ ನಗರದಲ್ಲಿ ಆರಂಭವಾದ ಮಳೆ ಒಂದು ತಾಸು ಸುರಿಯಿತು. ಭಾರಿ ಮಳೆಗೆ ಬಿ.ಎಂ ರಸ್ತೆ, ಮಹಾವೀರ ವೃತ್ತ, ರೈಲ್ವೆ ಮೇಲ್ಸೇತುವೆ ರಸ್ತೆಯಲ್ಲಿ ನೀರು ನಿಂತು ವಾಹನಗಳ ಸಂಚಾರದಲ್ಲಿ ವ್ಯತ್ಯಯವಾಯಿತು.

ಬೀದಿ ಬದಿ ವ್ಯಾಪಾರಿಗಳಿಗೂ ತೊಂದರೆ ಉಂಟಾಯಿತು. ಸಂಜೆ 6.30ರ ಬಳಿಕವೂ ಜಿಟಿಜಿಟಿ ಮಳೆಯಾಯಿತು. 

ಆಲೂರು, ಸಕಲೇಶಪುರ, ಬೇಲೂರು ಭಾಗದಲ್ಲಿ ಸಾಧಾರಣ ಮಳೆಯಾದರೆ, ಹಿರೀಸಾವೆ, ಹಳೇಬೀಡು, ಶ್ರವಣಬೆಳಗೊಳದಲ್ಲಿ ಒಂದು ಗಂಟೆಗೂ ಹೆಚ್ಚು ಮಳೆ ಸುರಿದಿದೆ. ಚನ್ನರಾಯಪಟ್ಟಣದಲ್ಲಿ ಗುರುವಾರ ರಾತ್ರಿ ಆರಂಭವಾದ ಮಳೆ ಬೆಳಗಿನ ಜಾವದವರೆಗೂ ಸುರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.