ಮಂಗಳವಾರ, ಆಗಸ್ಟ್ 3, 2021
24 °C

ಹಾಸನ: ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಜಾರಿಗೊಳಿಸಿರುವ ಭಾನುವಾರದ ಲಾಕ್‌ಡೌನ್‌ಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅಗತ್ಯ ತುರ್ತು ಸೇವೆ ಹೊರತು ಪಡಿಸಿ ಇತರೆ ವಹಿವಾಟು ಬಂದ್‌ ಆಗಿತ್ತು. ಬೆಳಿಗ್ಗೆಯಿಂದಲೇ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಆಟೊರಿಕ್ಷಾ, ಟ್ಯಾಕ್ಸಿ, ಬಸ್‌ ಮತ್ತಿತರ ವಾಹನಗಳು ರಸ್ತೆಗಿಳಿಯಲಿಲ್ಲ. ನಗರದ ಕಟ್ಟಿನಕೆರೆ ಮಾರುಕಟ್ಟೆ, ಕಸ್ತೂರ ಬಾ ರಸ್ತೆ, ದೊಡ್ಡ ಗರಡಿ ಬೀದಿ, ನಗರ ಸಾರಿಗೆ ಬಸ್‌ ನಿಲ್ದಾಣ, ಹೊಸ ಬಸ್‌ ನಿಲ್ದಾಣಗಳಲ್ಲಿ ಜನರು ಇರಲಿಲ್ಲ.

ರಸ್ತೆಗಳಲ್ಲಿ ಜನರು ಮತ್ತು ವಾಹನಗಳ ಸಂಖ್ಯೆ ವಿರಳವಾಗಿತ್ತು. ದಿನಸಿ, ಬಟ್ಟೆ, ಮಾಂಸದ ಅಂಗಡಿ ಸಂಪೂರ್ಣ ಬಂದ್‌ ಆಗಿತ್ತು. ಮಧ್ಯಾಹ್ನ ನಂತರ ಸುರಿದ ಮಳೆಯಿಂದಾಗಿ ಜನರು ಮನೆಯಿಂದ ಹೊರಗೆ ‌ಬರಲಿಲ್ಲ. ಪ್ರಮುಖ ವೃತ್ತಗಳಲ್ಲಿ ನಿಯೋಜನಗೊಂಡಿದ್ದ ಪೊಲೀಸರು, ಅನಗತ್ಯವಾಗಿ ಓಡಾಡುವವರಿಗೆ ಎಚ್ಚರಿಕೆ ನೀಡಿ ವಾಪಸ್‌ ಕಳುಹಿಸುತ್ತಿದ್ದರು. ಸಂಜೆ ನಂತರ ಬೆರಳಣಿಕೆ ವಾಹನಗಳು ರಸ್ತೆಗಿಳಿದಿದ್ದು ಕಂಡ ಬಂತು.

ಭಾನುವಾರ ಸಂಫೂರ್ಣ ಲಾಕ್‌ಡೌನ್ ಇದ್ದ ಕಾರಣ ಜನರು ಶನಿವಾರವೇ ಅಗತ್ಯ ವಸ್ತುಗಳನ್ನು ಖರೀದಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು