ಹಾಸನ: ಕರ್ನಾಟಕ ಬಂದ್‌ಗೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿಗಳು ಬಾಗಿಲು ಹಾಕಿದ್ದು, ವಾಹನಗಳ ಸಂಚಾರ ವಿರಳವಾಗಿದೆ.
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.
ಬೇಲೂರು, ಅರಸೀಕೆರೆ, ಅರಕಲಗೂಡು, ಸಕಲೇಶಪುರ, ಚನ್ನರಾಯಪಟ್ಟಣ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲೆಡೆಯೂ ಪ್ರತಿಭಟನೆಗಳು ನಡೆದಿವೆ. ಸಾರ್ವಜನಿಕರು ಹಾಗೂ ವರ್ತಕರಿಂದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಹಾಸನ ನಗರದಲ್ಲಿ ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಹೇಮಾವತಿ ಪ್ರತಿಮೆಯ ಬಳಿ ಧರಣಿ ನಡೆಸಿದರು. ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.