ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸರ್ಕಾರ ಶೀಘ್ರ ಪತನ: ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ

Last Updated 28 ಸೆಪ್ಟೆಂಬರ್ 2020, 13:51 IST
ಅಕ್ಷರ ಗಾತ್ರ

ಹಾಸನ: ರೈತರು, ಕಾರ್ಮಿಕರ ವಿರೋಧ ಕಟ್ಟಿಕೊಂಡರೆ ರಾಜ್ಯ ಸರ್ಕಾರ ಉಳಿಯಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರೈತ, ಕಾರ್ಮಿಕ ವಿರೋಧ ಕಾಯ್ದೆಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕೆಳಗಿಸಲು ಬಿಜೆಪಿಯವರೇ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರು ಸಹ ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಬೇಕು. ಬಿಜೆಪಿಗೆ ಮುಂದಿನ ದಿನಗಳಲ್ಲಿ ಭವಿಷ್ಯವಿಲ್ಲ. ಇನ್ನು ಆರು ತಿಂಗಳಲ್ಲಿ ಈ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್ ಈ ವಿಷಯವನ್ನು ರಾಜಕೀಯಗೊಳಿಸುತ್ತಿಲ್ಲ. 2–3 ಎಕರೆ ಭೂಮಿ ಇಟ್ಟುಕೊಂಡು ಜೀವನ ಮಾಡುತ್ತಿರುವ ರೈತರು ಎಲ್ಲಿಗೆ ಹೋಗಬೇಕು? ಕಷ್ಟದ ಸಂದರ್ಭದಲ್ಲಿ ಸಾಲ ಮಾಡಿರುವ ಹಣ ತೀರಿಸಲಾಗದೆ ತುಂಡು ಭೂಮಿಯನ್ನು ಮಾರಾಟ ಮಾಡಿ ಹಣವಂತರ ಮನೆಯಲ್ಲಿ ಜೀತ ಮಾಡುವ ಸ್ಥಿತಿ ಬರಲಿದೆ. ಬಿಹಾರ, ಮುಂಬೈ ಶ್ರೀಮಂತರು ರಾಜ್ಯದಲ್ಲಿ ಭೂಮಿ ಖರೀದಿಸುತ್ತಾರೆ. ರೈತರು ಮತ್ತು ಕಾರ್ಮಿಕರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT