ಶುಕ್ರವಾರ, ನವೆಂಬರ್ 27, 2020
24 °C

ಗ್ರಾ.ಪಂ ಚುನಾವಣೆ ನಡೆಸಲು ಸಿದ್ದ: ಸಚಿವ ಕೆ.ಎಸ್. ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಮೂರು ವಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್‌ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಹಾಗಾಗಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಶುಕ್ರವಾರ ಹಾಸನಾಂಬೆ ದರ್ಶನ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಚುನಾವಣೆ ಯಾವುದೇ ಪಕ್ಷಕ್ಕೆ
ಸೀಮಿತವಾಗಿಲ್ಲ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಚುನಾವಣೆ ಮುಂದೂಡುವಂತೆ ಕೋರ್ಟ್‌ ಮತ್ತು ಚುನಾವಣಾ ಆಯೋಗಕ್ಕೂ ತಿಳಿಸಲಾಗಿತ್ತು. ಕೆಲ ಜಿಲ್ಲೆಗಳಲ್ಲಿ ಸೋಂಕು ಪ್ರಮಾಣ ತಗ್ಗಿದೆ, ಮತ್ತೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಜನರಿಗೆ ತೊಂದರೆ ಆಗಬಾರದು ಎಂಬುದು ಸರ್ಕಾರದ ಉದ್ದೇಶವಾಗಿತ್ತು. ಈಗ ಕೋರ್ಟ್‌ ತೀರ್ಮಾನ ಒಪ್ಪಿಕೊಂಡು ಚುನಾವಣೆ ನಡೆಸಲಾಗುವುದು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.