ಗ್ರಾನೈಟ್ ಮಾಲೀಕನ ಬರ್ಬರ ಹತ್ಯೆ

ಗುರುವಾರ , ಮೇ 23, 2019
28 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಹಂತಕರು

ಗ್ರಾನೈಟ್ ಮಾಲೀಕನ ಬರ್ಬರ ಹತ್ಯೆ

Published:
Updated:
Prajavani

ಹಾಸನದ: ಬೇಲೂರು ರಸ್ತೆಯ ತಣ್ಣೀರು ಹಳ್ಳದ ಸುಭಾಶ್ ನಗರ ಬಡಾವಣೆಯಲ್ಲಿ ಬುಧವಾರ ರಾತ್ರಿ ಗ್ರಾನೈಟ್ ಮಾಲೀಕ ಅಪ್ಪಣ್ಣಗೌಡ (48)ರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಸಂಬಂಧಿಕರ ಮನೆಗೆ ಹೋಗಿ ನಂತರ ಮನೆಗೆ ಬಂದು ಅಪ್ಪಣ್ಣಗೌಡ ಮಲಗಿದ್ದರು. ಬೃಹತ್ ಮನೆಯ ಮುಂಬಾಗಿಲು ತೆರೆಯದೇ ಒಳ ನುಗ್ಗಿರುವ ಹಂತಕರು, ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಂದು ಪರಾರಿಯಾಗಿದ್ದಾರೆ. ಕೊಠಡಿಯ ಅನೇಕ ಕಡೆ ರಕ್ತದ ಕಲೆಗಳಾಗಿವೆ.

ಘಟನೆ ನಡೆದಾಗ ಮನೆಯಲ್ಲಿ ಯಾರು ಇರಲಿಲ್ಲ ಎನ್ನಲಾಗಿದೆ. ಮನೆ ಮುಂದೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ತಿಂಗಳ ಹಿಂದಷ್ಟೇ ಕೆಟ್ಟು ಹೋಗಿದ್ದವು ಎನ್ನಲಾಗಿದೆ.

ಅಪ್ಪಣ್ಣರಿಗೆ ಇಬ್ಬರು ಪತ್ನಿಯರು ಹಾಗೂ ನಾಲ್ವರು ಮಕ್ಕಳಿದ್ದರು. ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ಚುರುಕು ಗೊಳಿಸಿದ್ದಾರೆ.
ಘಟನೆ ನೆರೆ ಹೊರೆಯವರನ್ನು ಬೆಚ್ಚಿ ಬೀಳಿಸಿದ್ದರೆ, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತು.

ನಗರ ಠಾಣೆ ಪೊಲೀಸರು ಹಾಗೂ ಮೇಲಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಹಾಗೆಯೇ ಶ್ವಾನದಳದಿಂದಲೂ ತಪಾಸಣೆ ನಡೆಸಲಾಯಿತು.

ರಂಗನಾಥ ಗ್ರಾನೈಟ್ಸ್ ನಡೆಸುತ್ತಿದ್ದ ಅಪ್ಪಣ್ಣಗೌಡ, ಆರ್ಥಿಕವಾಗಿ ಸ್ಥಿತಿವಂತನಾಗಿದ್ದೂ, ಯಾರ ತಂಟೆ, ತಕರಾರಿಗೂ ಹೋಗುತ್ತಿರಲಿಲ್ಲ. ತಮ್ಮ ಕೆಲಸ ಮಾಡಿಕೊಂಡಿದ್ದರು.

ಮೃತ ಸಹೋದರ ಲೋಕೇಶ್‌ ದೂರು ಆಧರಿಸಿ ಪೊಲೀಸರು ಎಲ್ಲಾ ದೃಷ್ಟಿಕೋನಗಳಿಂದಲೂ ತನಿಖೆ ತೀವ್ರಗೊಳಿಸಿದ್ದಾರೆ.

‘ಆಸ್ತಿ ವೈಷ್ಯಮ್ಯದಿಂದ ಅಥವಾ ಕೌಟುಂಬಿಕ ಕಲಹದಿಂದ ಈ ಕೃತ್ಯ ನಡೆದಿದೆ ಎಂಬುದರ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪಕ್ಕಾ ಪ್ಲಾನ್ ಮಾಡಿ ಕೃತ್ಯ ಎಸಗಿ ಪರಾರಿಯಾಗಿದ್ದು, ಶೀಘ್ರ ಹಂತಕರನ್ನು ಪತ್ತೆ ಮಾಡಲಾಗುವುದು’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಚೇತನ್ ಸಿಂಗ್ ರಾಥೋಡ್ ತಿಳಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !