ಹಳೇಬೀಡು: ‘ಪುರಾತತ್ವ ವಸ್ತು ಸಂಗ್ರಹಾಲಯಗಳು ಪೀಳಿಗೆಯಿಂದ ಪೀಳಿಗೆಗೆ ಪರಂಪರೆಯನ್ನು ತಿಳಿಸುತ್ತವೆ. ಹೀಗಾಗಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ಜಗತ್ತಿನ ಪ್ರಮುಖ ಆಚರಣೆಗಳಲ್ಲೊಂದಾಗಿದೆ’ ಎಂದು ಕೇಂದ್ರ ಪುರಾತತ್ವ ಸರ್ವೆಕ್ಷಣಾ ಇಲಾಖೆ ಬೆಂಗಳೂರು ವೃತ್ತದ ಅಧೀಕ್ಷಕ ಡಾ.ಸುಜಿತ್ ನಯನ್ ಹೇಳಿದರು.

ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ ಆವರಣದಲ್ಲಿ ಸೋಮವಾರ ನಡೆದ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಸಮಾಜದಲ್ಲಿ ವಸ್ತು ಸಂಗ್ರಹಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಸಾಂಸ್ಕೃತಿಕ, ಶಿಕ್ಷಣ, ಶಾಂತಿ ಮತ್ತು ಸಾಮರಸ್ಯದ ಕೇಂದ್ರಗಳಾಗಿ ವಸ್ತು ಸಂಗ್ರಹಾಲಯಗಳು ಕಾರ್ಯನಿರ್ವಹಿಸುತ್ತಿವೆ’ ಎಂದು ಹೇಳಿದರು.

ನಿವೃತ್ತ ಪ್ರಾಂಶುಪಾಲ ಡಾ.ಜಿ.ಡಿ.ನಾರಾಯಣ್ ಮಾತನಾಡಿ, ‘ಇತಿಹಾಸದ ಅಮೂಲ್ಯ ಸಾಕ್ಷಿಗಳನ್ನು ಕೇಂದ್ರ ಹಾಗೂ ರಾಜ್ಯ ಪುರಾತತ್ವ ಸಂಗ್ರಹಾಲಯಗಳು ಸಂರಕ್ಷಿಸುತ್ತಿವೆ. ಸಂಪೂರ್ಣ ಇತಿಹಾಸದ ಮಾಹಿತಿ ಪರಿಪೂರ್ಣವಾಗಿ ಲಭ್ಯವಾಗಿಲ್ಲ. ಇತಿಹಾಸದ ಸಾಕ್ಷಿ ಆಧಾರಗಳನ್ನು ನಾಶ ಮಾಡಬಾರಾದು. ತಮ್ಮ ಮನೆಯಲ್ಲಿರುವ ಪರಂಪರೆ ಬಿಂಬಿಸುವ ವಸ್ತುಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು’ ಎಂದರು.

ಸಹಾಯಕ ಪ್ರಾಧ್ಯಾಪಕ ರಾಘವೇಂದ್ರ ಕೆ.ಸಿ, ಸಹಾಯಕ ಪುರಾತತ್ವ ಅಧೀಕ್ಷಕ ಡಾ.ವೀರ ರಾಘವನ್.ಎನ್, ಸಹಾಯಕ ಸ್ಮಾರಕ ಸಂರಕ್ಷಣಾಧಿಕಾರಿ ಸುನಿಲ್, ಹಿರಿಯ ಪುರಾತತ್ವ ಛಾಯಾಗ್ರಾಹಕ ಬಸವರಾಜು ಮಾತನಾಡಿದರು.

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ಕರ್ನಾಟಕ ವಸ್ತು ಸಂಗ್ರಹಾಲಯಗಳ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-36-910419407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.