ಹಳೇಬೀಡು: ಶಾಲೆಯ ಸುತ್ತಲಿನ ಮನೆಗಳಲ್ಲಿ ಹಾಗೂ ಸಣ್ಣ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ಹಳ್ಳಿಗಳಲ್ಲಿ ಜನಜೀವನ ಹದಗೆಟ್ಟಿದೆ ಎಂದು ಆರೋಪಿಸಿ ರಾಜನಶಿರಿಯೂರು ಗ್ರಾಮಸ್ಥರು ಈಚೆಗೆ ಪ್ರತಿಭಟನೆ ನಡೆಸಿದರು.

ರಾಜನಶಿರಿಯೂರು, ಬಂಡಿಲಕ್ಕನಕೊಪ್ಪಲು, ಕಲ್ಲು ಶೆಟ್ಟಿಹಳ್ಳಿ ಕೇರೆಕೋಡಿ ಗ್ರಾಮಗಳಲ್ಲಿ ಮದ್ಯ ಅಕ್ರಮ ಮಾರಾಟದಿಂದ ಗ್ರಾಮದ ನೆಮ್ಮದಿಗೆ ಭಂಗವಾಗಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

‘ಮದ್ಯದ ಹಾವಳಿಯಿಂದ ಕುಟುಂಬಗಳಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ಮದ್ಯದ ಚಟಕ್ಕೆ ಬಲಿಯಾದವರು ಮಕ್ಕಳ ವಿದ್ಯಾಭ್ಯಾಸದ, ತುರ್ತು ಸಂದರ್ಭದ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಬೀಳದಿದ್ದರೆ ತೀವ್ರ ಪ್ರತಿಭಟನೆ ನಡೆಸುತ್ತೇವೆ’ ಎಂದು ಗ್ರಾಮಸ್ಥರಾದ ಗೀತಾ ಎಚ್ಚರಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಯಶಂಕರ್, ‘ಅಬಕಾರಿ ಇಲಾಖೆಯವರು ಕಣ್ಮುಚ್ಚಿ ಕುಳಿತಿದ್ದಾರೆ. ಪೊಲೀಸರೂ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ದೂರಿದರು.

ನಿಂಗೇಗೌಡ, ಲತೇಶ್ ಆರ್.ಆರ್., ಗಂಗಾಧರ, ರಾಮನಹಳ್ಳಿ ಯೋಗೇಶ, ಜಗದೀಶ್, ಮೋಹನಕುಮಾರ, ಸುಧಾಕರ, ಪರಮೇಶ್, ಮಣಿ, ರೂಪಾ, ಮೀನಾಕ್ಷಿ, ಸುಜಾತಾ, ನೀಲಾವತಿ, ಶಾರದಾ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-36-2041770367

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.