ಹಳೇಬೀಡು: ಭಾರತೀಯ ರೆಡ್ ಕ್ರಾಸ್ ಬೇಲೂರು ತಾಲ್ಲೂಕು ಘಟಕದ ಆಶ್ರಯದಲ್ಲಿ ಮಂಗಳವಾರ ವಿಶ್ವ ಮಲೇರಿಯಾ ದಿನದ ಅಂಗವಾಗಿ ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು.

ಬೇಲೂರಿನ ತಾಲ್ಲೂಕು ರೆಡ್ ಕ್ರಾಸ್ ಸಂಸ್ಥೆ, ರೋಟರಿ ಕ್ಲಬ್, ತಾಲ್ಲೂಕು ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಭಾರತೀಯ ರೆಡ್ ಕ್ರಾಸ್ ತಾಲ್ಲೂಕು ಘಟಕ ಸಭಾಪತಿ ವೈ.ಎನ್.ಸಿದ್ದೇಗೌಡ ಮಾತನಾಡಿ, ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ. ಆರೋಗ್ಯದ ದೃಷ್ಟಿಯಿಂದ ಕುಡಿಯುವ ನೀರಿನ ಸಂರಕ್ಷಣೆ ಹಾಗೂ ಸ್ವಚ್ಛ ಪರಿಸರ ನಿರ್ಮಾಣದತ್ತ ಜನರು ಗಮನ ಹರಿಸಬೇಕು ಎಂದರು.

ವೈದ್ಯಾಧಿಕಾರಿ ಬಾ.ಅನುಪಮ ಶೆಟ್ಟಿ ಮಾತನಾಡಿದರು. ಐಸಿಟಿಸಿ ಸಿಬ್ಬಂದಿ ಧರಣೇಶ್ ಏಡ್ಸ್ ಕುರಿತು ಜಾಗೃತಿ ಮೂಡಿಸಿದರು. ಎನ್ಸಿಡಿ ವಿಭಾಗದ ಹಾಲೇಶ್ ರಕ್ತದೊತ್ತಡ, ಮಧುಮೇಹದ ಮಾಹಿತಿ ನೀಡಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸೇರಿ ವಿವಿಧ ಸಂಘಸಂಸ್ಥೆಗಳಲ್ಲಿ ಅಮೋಘವಾದ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಮುತ್ತಗನ್ನೆ ರಾಜಕುಮಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 50 ಮಂದಿ ಉಚಿತ ಆರೋಗ್ಯ ತಪಾಸಣೆಯ ಸದುಪಯೋಗ ಪಡೆದರು.

ರೆಡ್ ಕ್ರಾಸ್ ತಾಲ್ಲೂಕು ಕಾರ್ಯದರ್ಶಿ ಧನಂಜಯ ನಿರೂಪಿಸಿದರು. ಬ್ಯಾಡಿಗೆರೆ ರಾಜಶೇಖರ್ ಸ್ವಾಗತಿಸಿದರು. ಚಂದನ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-36-910715371

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.