ಘಟನೆ ಬಗ್ಗೆ ವಿಷಾದವಿದೆ. ಅಗತ್ಯ ಇರುವೆಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಮೊಬೈಲ್‍ಫೋನ್‌ಗೆಗೆ ಸಂಪರ್ಕ ತೆಗೆದುಕೊಳ್ಳುತ್ತೇನೆ. ಕೂಡಲೇ ಸಭೆ ನಡೆಸಿ ವೈದ್ಯರು ಮತ್ತು ಸಿಬ್ಬಂದಿಗೆ ಸೂಚನೆ ನೀಡುತ್ತೇನೆ.
– ಡಾ. ಕಿಶೋರ್, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ
ನನ್ನ ಸಹೋದರ ರಾತ್ರಿ 12 ಗಂಟೆಗೆ ಆಸ್ಪತ್ರೆಗೆ ಬಾಗಿಲು ತಟ್ಟಿದ್ದಾನೆ. ಬಾಗಿಲು ತೆರೆಯದಿದ್ದಾಗ ಮನೆಗೆ ಬಂದು ಶೌಚಾಲಯಕ್ಕೆ ತೆರಳಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಇಂತಹ ಘಟನೆ ಆಗದಂತೆ ಕ್ರಮ ಕೈಗೊಳ್ಳಬೇಕು.