ಶುಕ್ರವಾರ, ಅಕ್ಟೋಬರ್ 18, 2019
23 °C

ಹಾಸನ ಜಿಲ್ಲೆ ಯಾರಿಗೂ ಬರೆದುಕೊಟ್ಟಿಲ್ಲ: ದೇವೇಗೌಡ ಕುಟುಂಬಕ್ಕೆ ಮಾಧುಸ್ವಾಮಿ ಟಾಂಗ್

Published:
Updated:

ತುಮಕೂರು : ಹಾಸನ ಜಿಲ್ಲೆ ಕರ್ನಾಟಕದಲ್ಲಿಯೇ ಇದೆ, ಅದನ್ನು ಯಾರಿಗೂ ಬರೆದು ಕೊಟ್ಟಿಲ್ಲ ಎಂದು  ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ‌ಎಂದು ದೇವೇಗೌಡ ಕುಟುಂಬಕ್ಕೆ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. 

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ' ಆಡಳಿತ ವ್ಯವಸ್ಥೆ ಹಳಿ ಮೇಲೆ ಸರಿಯಾಗಿ ಸಾಗಲಿ, ಅಧಿಕಾರಿಗಳು ಕಾನೂನು ಬದ್ಧವಾಗಿ ಕೆಲಸ ಮಾಡಬೇಕು. ನಿಯಮಬಾಹಿರವಾಗಿ ಕೆಲಸ ಮಾಡಬಾರದು ಎಂಬುದು ನನ್ನ ನಿರೀಕ್ಷೆಯಾಗಿದ್ದು ಅದಕ್ಕೆ ತಕ್ಕಂತೆ ಅವರು ಕೆಲಸ ಮಾಡುವ ಭರವಸೆ ಇದೆ ಎಂದು ಮಾಧುಸ್ವಾಮಿ ‌ಹೇಳಿದರು. 

ಹಾಸನದಲ್ಲಿ ರೇವಣ್ಣ ಅವರು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾರೆ? ಅವರ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವ ಪ್ರಶ್ನೆ ಇಲ್ಲ. ಆ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಸಮರ್ಥವಾಗಿ ಕೆಲಸ ಮಾಡುತ್ತೇನೆ ಎಂಬ ವಿಶ್ವಾಸವಿದೆ ಎಂದು ಮಾಧುಸ್ವಾಮಿ ಹೇಳಿದರು. 

Post Comments (+)