ಹಾಸನ: ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ಹೇಗೆ ಎಂಬುದೇ ನಮ್ಮ ಮುಂದಿನ ಸವಾಲಾಗಿದ್ದು, ಇದಕ್ಕೆ ಪ್ರತಿಯೊಬ್ಬ ಪ್ರಜೆ ಕೈಜೋಡಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಸ್ವಾಯತ್ತ ಕಾಲೇಜಿಗೆ ಭೇಟಿ ನೀಡಿದ ವೇಳೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಹುಟ್ಟಿದ ಮೇಲೆ ಏನನ್ನಾದರೂ ಸಾಧಿಸಬೇಕು. ಪ್ರಸ್ತುತ ಸನ್ನಿವೇಶದಲ್ಲಿ ಬದಲಾವಣೆಗೆ ಪ್ರತಿಯೊಬ್ಬರು ಸಿದ್ದರಾಗಬೇಕು. ಯಾವುದೇ ಕೆಲಸವಾದರೂ ಶ್ರದ್ಧೆ, ನಿಷ್ಠೆ, ಸೇವೆ ಎಂಬುದು ಮುಖ್ಯವಾಗುತ್ತದೆ. ಪ್ರಸ್ತುತ ಸಮಾಜದಲ್ಲಿ ಬದಲಾವಣೆಯ ಪುಟ ಬರೆಯಬೇಕಿರುವುದು ಯುವ ಸಮುದಾಯ’ ಎಂದರು.

ಕಾನೂನನ್ನು ಅರಿತ ಮಹಿಳೆ ಶಕ್ತಳಾಗುತ್ತಾಳೆ ಎಂದ ಅವರು, ಮಹಿಳೆಯರ ಸಂರಕ್ಷಣೆಗೆ ಇರುವ ಮೊಬೈಲ್ ಅಪ್ಲಿಕೇಷನ್ಗಳ ಕುರಿತು ಜಾಗೃತಿ ಮೂಡಿಸಿದರು.

‘ಜ್ಞಾನವೇ ದೇವರು, ಅಜ್ಞಾನವೇ ಸಾವು ಎಂಬ ಅಂಬೇಡ್ಕರ್ ವಾಕ್ಯವನ್ನು ನಮ್ಮಲ್ಲಿ ರೂಢಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಆರ್ಥಿಕವಾಗಿ ಸಬಲವಾಗಬೇಕು’ ಎಂದರು.

ನಗರದ ಸೆನ್ ಪೊಲೀಸ್ ಠಾಣೆಯ ಪಿಎಸ್ಐ ಮಧು ಎಂ.ಸಿ. ಮಾತನಾಡಿ,‘ಪೊಲೀಸ್ ಎಂಬುದು ಭಯ ಅಲ್ಲ; ಭರವಸೆ. ವಿದ್ಯಾರ್ಥಿಗಳು ಮೊಬೈಲ್ ಫೋನ್ ದಾಸರಾಗಬೇಡಿ. ಶ್ರಮದ ಓದಿನಿಂದ ಉತ್ತಮ ಫಲ ಸಾಧ್ಯವಾಗುತ್ತದೆ’ ಎಂದು ಹೇಳಿದರು.

ಸೈಬರ್ ಅಪರಾಧಗಳಿಗೆ ಸಂಬಂಧಿಸಿದ ದೂರುಗಳನ್ನು ನೀಡಲು ಭಯ ಪಡದೇ ಮುಂದೆ ಬನ್ನಿ ಎಂದರು.

ಪ್ರಾಂಶುಪಾಲ ಡಾ.ಎಂ.ಬಿ. ಇರ್ಷಾದ್ ಮಾತನಾಡಿ, ‘ಪದವಿಯನ್ನು ಎಲ್ಲ ವಿಶ್ವವಿದ್ಯಾಲಯಗಳು ನೀಡುತ್ತವೆ. ಸಂಸ್ಕಾರವನ್ನು ಕೊಡುವ ಕೆಲಸ ಆಗಬೇಕು’ ಎಂದರು.

ಇದೇ ಸಂದರ್ಭದಲ್ಲಿ ಡಾ.ನಾಗಲಕ್ಷ್ಮಿ ಚೌಧರಿ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್, ಶೈಕ್ಷಣಿಕ ಡೀನ್ ರಾಜು ಡಿ.ಎಸ್, ಪರೀಕ್ಷಾ ನಿಯಂತ್ರಕ ಡಾ.ಮುರಳೀಧರ ಕೆ.ಡಿ., ಪತ್ರಾಂಕಿತ ವ್ಯವಸ್ಥಾಪಕ ಸತ್ಯಮೂರ್ತಿ ಕೆ.ಟಿ, ಎಲ್ಲ ವಿಭಾಗಗಳ ಪ್ರಾಧ್ಯಾಪಕರು, ಉಪನ್ಯಾಸಕರು ಇದ್ದರು.

ಕನಸು ಯಾವಾಗಲೂ ದೊಡ್ಡದಾಗಿರಬೇಕು. ಸಮ ಸಮಾಜದ ನಿರ್ಮಾಣಕ್ಕೆ ಲಿಂಗ ತಾರತಮ್ಯ ಇಲ್ಲದೇ ಒಗ್ಗೂಡಬೇಕಿದೆ
– ಡಾ.ನಾಗಲಕ್ಷ್ಮಿ ಚೌಧರಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.