ಹಾಸನ: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ನಿಟ್ಟನಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಸಹಭಾಗಿತ್ವದಲ್ಲಿ ಕೆಲಸ ನಿರ್ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ರಾಕ್ಷಾಯಣಿ ಜಿ.ಕೆ. ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಆಚರಣೆ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ನಿರಂತರ ಆಕಾಶವಾಣಿ, ಸ್ಥಳೀಯ ಪತ್ರಿಕೆಗಳು, ಸಂತೆಗಳಲ್ಲಿ ಹಾಗೂ ಜಾತ್ರೆಯ ವೇದಿಕೆಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಅಯೋಜಿಸುವಂತೆ ತಿಳಿಸಿದರು.

ನಗರಸಭೆ ಕಸ ವಿಲೇವಾರಿ ವಾಹನಗಳಲ್ಲಿ ಬಾಲಕಾರ್ಮಿಕ ಪದ್ಧತಿ ಕುರಿತು ಜಿಂಗಲ್ ಮೂಲಕ ಪ್ರಚಾರಪಡಿಸಬೇಕು. ಗ್ರಾಮ ಪಂಚಾಯಿತಿಯಿಂದ ಬಾಲ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣದ ಬಗ್ಗೆ ಡಂಗೂರ ಸಾರಿಸಬೇಕು ಎಂದು ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ ಮಾತನಾಡಿ, ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು. ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್. ವಿದ್ಯಾರ್ಥಿಗಳು ಹಾಗೂ ಉದ್ದಿಮೆಗಳ ಮಾಲೀಕರು, ಶಾಲಾ-ಕಾಲೇಜುಗಳಲ್ಲಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಪೋಷಕರು, ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರೊಂದಿಗೆ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಜಾಥಾ ಹಮ್ಮಿಕೊಂಡು ಅರ್ಥಪೂರ್ಣವಾಗಿ ಆಚರಿಸುವಂತೆ ಅವರು ತಿಳಿಸಿದರು.

ಸಮಾಜದ ಪ್ರತಿಯೊಬ್ಬ ನಾಗರಿಕರು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇಲಾಖೆಗಳು, ಬಾಲಕಾರ್ಮಿಕತೆ, ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗುಗಳನ್ನು ನಿವಾರಿಸುವಲ್ಲಿ ಜವಾಬ್ದಾರಿ ನಿರ್ವಹಿಸಬೇಕು ಎಂದರು.

ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಜೂನ್ 12 ರಂದು ಒಟ್ಟಾಗಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮವನ್ನು ಆಯೋಜಿಸಲು ತಿಳಿಸಲಾಯಿತು. ಪ್ರಭಾರ ಕಾರ್ಮಿಕ ಅಧಿಕಾರಿ ಆನಂದರಾಮು ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-36-1906677002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.