ಹಾಸನ: ರಾಜ್ಯದಲ್ಲಿ ಜಾರಿಯಲ್ಲಿರುವ ಜಾನುವಾರು ವಧೆ ಹಾಗೂ ಮಾರಾಟ ನಿಷೇಧ ಕಾಯ್ದೆ–2020 ರೈತ ವಿರೋಧಿಯಾಗಿದ್ದು, ಅದನ್ನು ಹಿಂಪಡೆದು, ಜಾನುವಾರುಗಳ ಮಾರಾಟಕ್ಕೆ ರೈತರಿಗೆ ಮುಕ್ತ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್ಆರ್ಎಸ್), ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ಎಸ್) ಹಾಗೂ ಜಿಲ್ಲಾ ದಲಿತ ಮತ್ತು ಜನಪರ ಚಳವಳಿಗಳ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಎದುರು ಸಂಘಟಿತರಾದ ರೈತರು ಹಾಗೂ ಪ್ರತಿಭಟನಕಾರರು ಪ್ರತಿಭಟನಾ ಮೆರವಣಿಗೆ ಹೊರಟು ಎನ್.ಆರ್. ವೃತ್ತದ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು.

ಕೆಆರ್ಆರ್ಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಾಬು, ಕೃಷಿ ಕ್ಷೇತ್ರ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರೈತರು ಹೈನುಗಾರಿಕೆಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿದ್ದಾರೆ. ಹಾಲು ಉತ್ಪಾದನೆಗಾಗಿ ಸಾಕುವ ಜರ್ಸಿ ಹಸುಗಳು ವಯಸ್ಸಾದ ಬಳಿಕ ಹಾಗೂ ಗಂಡು ಕರು ಜನಿಸಿದ ಸಂದರ್ಭಗಳಲ್ಲಿ ಅವುಗಳನ್ನು ಸಾಕುವುದು ರೈತರಿಗೆ ಆರ್ಥಿಕ ಹೊರೆಯಾಗುತ್ತಿದೆ. ಇಂತಹ ಅನುಪಯುಕ್ತ ಜಾನುವಾರುಗಳನ್ನು ಮಾರಾಟ ಮಾಡುವ ಮೂಲಕ ರೈತರು ಸ್ವಲ್ಪ ಆದಾಯ ಗಳಿಸುತ್ತಿದ್ದರು. ಆದರೆ ಜಾನುವಾರು ವಧೆ ಹಾಗೂ ಮಾರಾಟ ನಿಷೇಧ ಕಾಯ್ದೆಯಿಂದ ರೈತರು ತಮ್ಮ ರಾಸುಗಳನ್ನು ಮುಕ್ತವಾಗಿ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

ಕಾಯ್ದೆಯನ್ನು ದುರುಪಯೋಗ ಪಡಿಸಿಕೊಂಡು ಕೆಲವು ಹಿಂದುತ್ವ ಸಂಘಟನೆಗಳು ಮತ್ತು ಬಜರಂಗದಳದಂತಹ ಸಂಘಟನೆಗಳು ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸುವ ಹಾಗೂ ನೈತಿಕ ಪೊಲೀಸ್ಗಿರಿ ಮಾಡುತ್ತಿದ್ದಾರೆ ಎಂದು ದೂರಿದರು.

ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ತನ್ನ ಇಚ್ಛೆಯ ಧರ್ಮಪಾಲನೆ ಹಾಗೂ ಆಹಾರ ಸೇವನೆಗೆ ಸ್ವಾತಂತ್ರ್ಯ ನೀಡಿದೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಗೋವುಗಳ ಸಾಗಣೆ ಮತ್ತು ಮಾರಾಟದ ಮೇಲೆ ವಿಧಿಸಲಾಗುತ್ತಿರುವ ನಿರ್ಬಂಧಗಳು ಅಲ್ಪಸಂಖ್ಯಾತರು ಹಾಗೂ ರೈತರ ಹಕ್ಕಿನ ಮೇಲಿನ ದಾಳಿಯಾಗಿದೆ ಎಂದು ಆರೋಪಿಸಿದರು.

ಜಿಲ್ಲಾಡಳಿತವು ಈ ನಿಲುವುಗಳನ್ನು ಸಡಿಲಗೊಳಿಸಿ, ರೈತರಿಗೆ ಜಾನುವಾರುಗಳ ಮುಕ್ತ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕು. ಜೊತೆಗೆ ಧರ್ಮದ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಹಾಗೂ ಕೋಮು ಸೌಹಾರ್ದ ಕದಡುವ ಶಕ್ತಿಗಳನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ರವಿ ಆನೇಕೆರೆ, ಜಿಲ್ಲಾ ಘಟಕದ ಕಾರ್ಯದರ್ಶಿ ಪವಿತ್ರಾ, ಕೆಪಿಆರ್ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಆರ್. ನವೀನ್ ಕುಮಾರ್, ಧರ್ಮೇಶ್, ಟಿ.ಆರ್. ವಿಜಯ್ ಕುಮಾರ್, ರಾಜಶೇಖರ್ ಹುಲಿಕಲ್, ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಧರ್ಮೇಶ್, ಮಾದಿಗ ದಂಡೋರ ಹೋರಾಟ ಸಮಿತಿ ಮುಖಂಡರು ಹಾಗೂ ದಲಿತ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-36-1680582251

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.