ಹಾಸನ: ನಗರ ವ್ಯಾಪ್ತಿಯಲ್ಲಿ ಆಶ್ರಯ ಇಲ್ಲದೇ, ರಸ್ತೆ ಬದಿ, ಬಸ್ ನಿಲ್ದಾಣಗಳಲ್ಲಿ ಮಲಗುವ ನಿರ್ಗತಿಕರು, ಅರಕಲಗೂಡು ರಸ್ತೆಯ ಮಹಾನಗರ ಪಾಲಿಕೆ ಹಿಂಭಾಗದಲ್ಲಿರುವ ವಸತಿ ರಹಿತರ ಆಶ್ರಯ ಘಟಕದ (ಪುರುಷರ) ಸೌಲಭ್ಯ ಪಡೆಯಲು ಹೆಚ್ಚಿನ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಸೂಚಿಸಿದರು.

ಬುಧವಾರ ಡೇ-ನಲ್ಮ್ ಯೋಜನೆಯಡಿ ನಗರ ವಸತಿ ರಹಿತರ ಆಶ್ರಯ ಕೇಂದ್ರದ ಅಧಿಕಾರಯುಕ್ತ ಸಮಿತಿ ಸಭೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ನಗರದಲ್ಲಿ ಆಶ್ರಯ ಕೇಂದ್ರವನ್ನು ಎನ್ಜಿಒ ನಿರ್ವಹಿಸುತ್ತಿದ್ದು, ವಸತಿ ರಹಿತರನ್ನು ರ್ಯಾಪಿಡ್ ಸಮೀಕ್ಷೆಯ ಮೂಲಕ ಗುರುತಿಸಿ ಅವಶ್ಯಕತೆ ಇರುವ ಪುರುಷ ವಸತಿ ರಹಿತರಿಗೆ ಆಶ್ರಯ ಕಲ್ಪಿಸುವಂತೆ ನಿರ್ದೇಶನ ನೀಡಿದರು. ರಸ್ತೆ ಬದಿಯಲ್ಲಿ ಯಾರೂ ಮಲಗದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಆಶ್ರಯ ಕೇಂದ್ರದಲ್ಲಿ ಸೌಲಭ್ಯಗಳನ್ನು ಕಲ್ಪಿಸುವಂತೆ ತಿಳಿಸಿದರು. ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-36-226189424

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.