ಹಾಸನ: ಮಲಬಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ 182 ವಿದ್ಯಾರ್ಥಿನಿಯರಿಗೆ ₹15.18 ಲಕ್ಷ ಮೊತ್ತದ ವಿದ್ಯಾರ್ಥಿ ವೇತನವನ್ನು ನಗರದ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ಶೋರೂಂನಲ್ಲಿ ವಿತರಿಸಲಾಯಿತು.

ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ವಿದ್ಯಾರ್ಥಿನಿಯರಿಗೆ ಶಿಕ್ಷಣವು ಒಂದು ಆಭರಣ. ಎಲ್ಲ ವಿದ್ಯಾರ್ಥಿನಿಯರು ಒಳ್ಳೆಯ ಶಿಕ್ಷಣ ಪಡೆದು ಒಳ್ಳೆಯ ಉದ್ಯೋಗ ಮಾಡಬೇಕು. ಮಲಬಾರ್ ಚಾರಿಟಬಲ್ ಸಂಸ್ಥೆಯು ಇದೇ ರೀತಿ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯವನ್ನು ಮಾಡಲಿ ಎಂದರು.

ಸಂಸ್ಥೆಯ ಕರ್ನಾಟಕ ಸಿಎಸ್ಆರ್ ವ್ಯವಸ್ಥಾಪಕ ಹೈದರ್ ಮಾತನಾಡಿ, ಸಂಸ್ಥೆಯು 1999 ರಲ್ಲಿ ಮಲಬಾರ್ ಚಾರಿಟಬಲ್ ಟ್ರಸ್ಟ್ ಪ್ರಾರಂಭ ಮಾಡಿದ್ದು, ವ್ಯವಹಾರದಿಂದ ಬರುವ ಲಾಭಾಂಶದಲ್ಲಿ ಶೇ 5 ರಷ್ಟು ಸಮಾಜಮುಖಿ ಕಾರ್ಯಕ್ಕೆ ನೀಡುತ್ತಿದೆ. ಹಸಿವು ಮುಕ್ತ ಜಗತ್ತು ಹೀಗೆ ನಾನಾ ರೀತಿಯ ಸಮಾಜಮುಖಿ ಕಾರ್ಯಗಳನ್ನು ಒಳಗೊಂಡಿದೆ. ರಾಜ್ಯದಾದ್ಯಂತ 7,614 ವಿದ್ಯಾರ್ಥಿನಿಯರ ವ್ಯಾಸಂಗಕ್ಕೆ ನೆರವಾಗುವ ದೃಷ್ಟಿಯಿಂದ ಒಟ್ಟು ₹6.11 ಕೋಟಿ ಮೊತ್ತದ ವಿದ್ಯಾರ್ಥಿವೇತನ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲೆ ಡಾ. ಕವಿತಾ ಸಿ.ವಿ. ಮಾತನಾಡಿ, ಒಬ್ಬ ಮಹಿಳೆ ಕಲಿತರೆ ಇಡೀ ಸಮಾಜವೇ ಕಲಿತಂತೆ. ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಮಾತನಾಡಿ, ವಿದ್ಯಾರ್ಥಿನಿಯರು ವಿದ್ಯಾರ್ಥಿ ವೇತನದ ಹಣವನ್ನು ಸದ್ಬಳಕೆ ಮಾಡಿಕೊಂಡು ಅತ್ಯುತ್ತಮ ವಿದ್ಯಾರ್ಥಿ ಆಗಬೇಕು. ಸಮಾಜ ಕಟ್ಟುವ ಕಾರ್ಯವನ್ನು ಮಲಬಾರ್ ಚಾರಿಟಬಲ್ ಸಂಸ್ಥೆಯು ಮಾಡುತ್ತಿದೆ ಎಂದರು.

ಆಕಾಶವಾಣಿ ಹಾಸನದ ಕಾರ್ಯಕ್ರಮ ಸಂಯೋಜಕ ಆರ್.ವಿ. ಮಧುಸೂದನ್, ಸಮಾಜ ಸೇವಕ ಯು.ಜೆ. ಮಲ್ಲಿಕಾರ್ಜುನ ಮಾತನಾಡಿದರು. ಹಾಸನ ಶಾಖಾ ಮುಖ್ಯಸ್ಥ ಅಬ್ದುಲ್ ಶುಕೂರ್, ಚಿಕ್ಕಮಗಳೂರು ಶಾಖಾ ಮುಖ್ಯಸ್ಥ ಶ್ರೀನಾಥ್, ಸಿಬ್ಬಂದಿ, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-36-798845866

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.