ಹಾಸನ: ಕಾರ್ಮಿಕರ ಕನಿಷ್ಠ ವೇತನವನ್ನು ತಿಂಗಳಿಗೆ ₹36 ಸಾವಿರಕ್ಕೆ ಹೆಚ್ಚಿಸಬೇಕು ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಮೇ 30ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಧರ್ಮೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶವು ತೀವ್ರ ಸಾಮಾಜಿಕ ಹಾಗೂ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳ ಪರಿಣಾಮ ಉತ್ಪಾದನಾ ವಲಯ ಕುಸಿತ ಕಂಡಿದೆ. ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದೇಶದ ಆರ್ಥಿಕತೆ ಅಭಿವೃದ್ಧಿಯ ಹಾದಿಯಲ್ಲಿದೆ ಎಂಬ ಸರ್ಕಾರದ ವಾದ ವಾಸ್ತವಕ್ಕೆ ದೂರವಾಗಿದೆ ಎಂದು ಟೀಕಿಸಿದರು.

ದೇಶದ ಒಟ್ಟು ಸಂಪತ್ತಿನ ಶೇ 90ರಷ್ಟು ಭಾಗ ಕೇವಲ ಶೇ 10ರಷ್ಟು ಶ್ರೀಮಂತರ ಕೈಯಲ್ಲಿ ಕೇಂದ್ರೀಕೃತವಾಗಿದೆ. ಉದ್ಯಮಿಗಳ ಆಸ್ತಿ ಅಪಾರವಾಗಿ ಏರಿಕೆ ಆಗುತ್ತಿರುವ ಸಂದರ್ಭದಲ್ಲಿ ಉನ್ನತ ಶಿಕ್ಷಣ ಪಡೆದ ಯುವಕರಿಗೂ ಸಮರ್ಪಕ ಸಂಬಳ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನಿಷ್ಠ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಜಿಲ್ಲೆಯಾದ್ಯಂತ ಸಾರ್ವಜನಿಕರಿಂದ ಸಹಿ ಸಂಗ್ರಹ ನಡೆಸಲಾಗಿದೆ. ಪ್ರತಿಭಟನೆಯಲ್ಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ, ಖಜಾಂಚಿ ಅರವಿಂದ್, ಸೌಮ್ಯ,ಕೆ.ಟಿ.ಹೊನ್ನೇಗೌಡ, ಮಂಜುಳಾ, ಪ್ರಕಾಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-36-591029699

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.