ಹಾಸನ: ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆ ಆಗಲಿದ್ದು, ಇತ್ತ ಜಿಲ್ಲೆಯಲ್ಲಿಯೂ ಹಲವು ನಿರೀಕ್ಷೆಗಳು ಗರಿಗೆದರಿವೆ. ಹಲವಾರು ಆಕಾಂಕ್ಷಿಗಳು ತಮ್ಮದೇ ಆದ ಲೆಕ್ಕಾಚಾರದಲ್ಲಿ ಮುಳುಗಿದ್ದು, ಹೊಸ ಸರ್ಕಾರದಲ್ಲಿ ಅವಕಾಶಗಳು ಸಿಗಲಿವೆ ಎನ್ನುವ ವಿಶ್ವಾಸದಲ್ಲಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಅರಸೀಕೆರೆಯ ಶಾಸಕ ಕೆ.ಎಂ.ಶಿವಲಿಂಗೇಗೌಡರನ್ನು ಗೃಹ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಟೇಲ್ ಶಿವಪ್ಪ ಅವರಿಗೆ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಇದರ ಜೊತೆಗೆ ಇನ್ನೂ ಕೆಲವು ನಿಗಮ–ಮಂಡಳಿ ನಿರ್ದೇಶಕ ಸ್ಥಾನಗಳಿಗೂ ನೇಮಕ ಮಾಡಲಾಗಿದೆ. ಆದರೆ, ಇದೀಗ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಈ ಎಲ್ಲ ನೇಮಕಾತಿಗಳನ್ನು ರದ್ದುಪಡಿಸಿ ಹೊಸ ನೇಮಕಾತಿ ಮಾಡಬಹುದು ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಹೈಕಮಾಂಡ್ ಜೊತೆಗಿನ ಚರ್ಚೆಯ ವೇಳೆ ಏನೆಲ್ಲ ಮಾತುಕತೆ ನಡೆದಿದೆ ಎನ್ನುವುದು ನಮಗೆ ಗೊತ್ತಿಲ್ಲ. ಕೇವಲ ಅಧಿಕಾರ ಹಸ್ತಾಂತರವೋ, ಇಲ್ಲ ಸಂಪೂರ್ಣವಾಗಿ ಹೊಸ ಆಡಳಿತವೋ ಎನ್ನುವುದನ್ನು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ನಿರ್ಧರಿಸಬೇಕು. ಹಾಗಾಗಿ ಈ ವಿಷಯದಲ್ಲಿ ಸದ್ಯಕ್ಕೆ ಏನೂ ಹೇಳಲು ಆಗುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದರು.

ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದ ಮಾದರಿಯ ಲ್ಲಿಯೇ ನಿಗಮ ಮಂಡಳಿಗಳ ಹಾಲಿ ಅಧ್ಯಕ್ಷರೂ, ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು. ಆಗ ಮಾತ್ರ ಎಲ್ಲರಿಗೂ ಅಧಿಕಾರ ದೊರೆ ಯುತ್ತದೆ. ಈ ನಿಟ್ಟಿನಲ್ಲಿ ಪಕ್ಷದ ಮುಖಂಡರೂ ಕುಳಿತು ಚರ್ಚೆ ಮಾಡಬೇಕು ಎನ್ನುವ ಒತ್ತಾ ಕೇಳಿ ಬರುತ್ತಿವೆ.

ಜಿಲ್ಲೆಯಲ್ಲಿ ಏಕೈಕ ಕಾಂಗ್ರೆಸ್ ಶಾಸಕರಿದ್ದು, ಸಂಸದರೂ ಕಾಂಗ್ರೆಸ್ ಪಕ್ಷದವರೇ. ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳ ಪೈಕಿ ಒಂದರಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿದ್ದು, ಇನ್ನುಳಿದ ಕ್ಷೇತ್ರಗಳಲ್ಲಿ ಪಕ್ಷದ ಬಲವರ್ಧನೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಉಳಿದ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರಿಗೂ ಅವಕಾಶ ಮಾಡಿಕೊಟ್ಟರೆ, ಮುಂದಿನ ಚುನಾವಣೆಯಲ್ಲಿ ಅನುಕೂಲ ಆಗಲಿವೆ ಎನ್ನುವ ಬೇಡಿಕೆಯನ್ನು ಪಕ್ಷದ ಮುಖಂಡರು ಮುಂದಿಟ್ಟಿದ್ದಾರೆ.

ಇನ್ನೂ 3 ತಿಂಗಳಾದರೂ ಕಾಯಬೇಕು: ನಿಗಮ–ಮಂಡಳಿಯ ಅಧ್ಯಕ್ಷ ಸ್ಥಾನವೂ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಅವಕಾಶ ಸಿಗಲು ಇನ್ನೂ 3 ತಿಂಗಳಾದರೂ ಕಾಯುವುದು ಅನಿವಾರ್ಯ ಎನ್ನಲಾಗುತ್ತಿದೆ.

ಸದ್ಯಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದು, ನಂತರ ಸಚಿವ ಸಂಪುಟದ ರಚನೆ ಆಗಬೇಕು. ಈ ಕುರಿತು ಶಿವಕುಮಾರ್ ಪಕ್ಷದ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಬೇಕು. ಮೊದಲ ಹಂತದಲ್ಲಿ 25 ಸಚಿವರನ್ನು ಸಂಪುಟಕ್ಕೆ ತೆಗೆದುಕೊಂಡಿದ್ದು, ಉಳಿದ ಸ್ಥಾನಗಳನ್ನು ಮುಂದಿನ ದಿನಗಳಲ್ಲಿ ಭರ್ತಿ ಮಾಡುವ ಲೆಕ್ಕಾಚಾರಗಳಿವೆ. ಅದಾದ ಮೇಲಷ್ಟೇ ನಿಗಮ–ಮಂಡಳಿಗಳ ಅಧ್ಯಕ್ಷ, ನಿರ್ದೇಶಕ ಸ್ಥಾನಗಳಿಗೆ ನೇಮಕಾತಿ ಆಗುವ ಸಾಧ್ಯತೆ ಗಳಿವೆ ಎಂದು ಪಕ್ಷದ ಮೂಲ ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-36-707437284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.