ಹಾಸನ: ಸ್ಥಳೀಯ ಆಡಳಿತದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮನ್ವಯ ಮತ್ತು ಪಾರದರ್ಶಕತೆಯಿಂದ ಕೆಲಸ ಮಾಡಿದರೆ, ಉತ್ತಮ ಆಡಳಿತ ಸಾಧ್ಯ. ಮಹಿಳಾ ಮೀಸಲಾತಿ, ಮಹಿಳಾ ಆರ್ಥಿಕ ಸಬಲೀಕರಣಗಳನ್ನು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಾತ್ರ ಕಾಣಬಹುದು ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಂಚಾಯತ್ ರಾಜ್ ದಿನಾಚರಣೆ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ‘1993ರಲ್ಲಿ 73 ನೇ ಸಂವಿಧಾನ ತಿದ್ದುಪಡಿ ಕಾಯ್ದೆಯ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಗೆ ಸಂವಿಧಾನಿಕ ಮಾನ್ಯತೆ ನೀಡಲಾಯಿತು. ಗ್ರಾಮಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಪಂಚಾಯಿತಿಗಳ ಪಾತ್ರ ಮಹತ್ವದ್ದಾಗಿದೆ. ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ 50 ಕ್ಕಿಂತಲೂ ಹೆಚ್ಚಿನ ಮೀಸಲಾತಿ ನೀಡಲಾಗಿದ್ದು, ಹೆಚ್ಚು ಮಹಿಳಾ ಸದಸ್ಯರೇ ಆಯ್ಕೆಯಾಗುತ್ತಾರೆ’ ಎಂದು ತಿಳಿಸಿದರು.

2025-26ನೇ ಸಾಲಿನಲ್ಲಿ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಉತ್ತಮ ಸಾಧನೆ ಮಾಡಿದ ಅರಸೀಕೆರೆ ತಾಲ್ಲೂಕು ಜಾವಗಲ್ ಗ್ರಾಮ ಪಂಚಾಯಿತಿ, ಹಾಸನ ತಾಲ್ಲೂಕು ಕೌಶಿಕ ಗ್ರಾಮ ಪಂಚಾಯಿತಿ ಹಾಗೂ ಚನ್ನರಾಯಪಟ್ಟಣ ತಾಲ್ಲೂಕು ಹಿರೀಸಾವೆ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳನ್ನು ಗೌರವಿಸಲಾಯಿತು.

ಗ್ರಾಮ ಪಂಚಾಯಿತಿ ಅರಿವು ಕೇಂದ್ರವನ್ನು ಉತ್ತಮವಾಗಿ ಅಭಿವೃದ್ದಿಪಡಿಸಿದ ಹಾಸನ ತಾಲ್ಲೂಕು ಹೂವಿನಹಳ್ಳಿ ಕಾವಲ್ ಗ್ರಾಮ ಪಂಚಾಯಿತಿ, ಉತ್ತಮ ಮಹಿಳಾ ಸ್ನೇಹಿ ಗ್ರಾಮ ಪಂಚಾಯಿತಿಯಾಗಿ ಅಭಿವೃದ್ದಿಪಡಿಸಿದ ಆಲೂರು ತಾಲ್ಲೂಕು ಪಾಳ್ಯ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳನ್ನು ಗೌರವಿಸಲಾಯಿತು. 2022-23 ನೇ ಸಾಲಿನ ರಾಷ್ಟ್ರೀಯ ಪಂಚಾಯತ್ ರಾಜ್ ಪುರಸ್ಕಾರ ಪಡೆದ ಸಕಲೇಶಪುರ ತಾಲ್ಲೂಕು ಬಿರಡಹಳ್ಳಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳನ್ನು ಗೌರವಿಸಲಾಯಿತು.

ಜಿ.ಪಂ. ಉಪ ಕಾರ್ಯದರ್ಶಿ ಬಾಬು, ಮುಖ್ಯ ಯೋಜನಾಧಿಕಾರಿ ಕೃಷ್ಣಮೂರ್ತಿ ಹಾಗೂ ಸಿಬ್ಬಂದಿ ಹಾಗೂ ಮಹಿಳಾ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-36-723477899

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.