ಹಾಸನ: ಪೋಕ್ಸೊ ಹಾಗೂ ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಹಾಸನ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ‘ದೂರು-ಸಲಹೆ ಪೆಟ್ಟಿಗೆ’ಗಳನ್ನು ಅಳವಡಿಸಲು ಮುಂದಾಗಿದೆ. ಮೊದಲ ಹಂತದಲ್ಲಿ ಜಿಲ್ಲೆಯ 51 ಶಾಲೆ–ಕಾಲೇಜುಗಳಲ್ಲಿ ಈ ವ್ಯವಸ್ಥೆ ಜಾರಿಗೊಳ್ಳಲಿದೆ ಎಂದು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಮತ್ತು ದುರ್ಬಲ ವರ್ಗದ ಪ್ರದೇಶಗಳಲ್ಲಿ ಓದುತ್ತಿರುವ ಅನೇಕ ಹೆಣ್ಣು ಮಕ್ಕಳು ಲೈಂಗಿಕ ಕಿರುಕುಳ, ಬೆದರಿಕೆ, ಬಾಲ್ಯ ವಿವಾಹದ ಒತ್ತಡ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ, ಕುಟುಂಬದವರಿಗೂ ಹೇಳಿಕೊಳ್ಳಲು ಸಾಧ್ಯವಾಗದೇ ಮೌನವಾಗಿ ನೋವು ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರಿಗೆ ತಮ್ಮ ಅಹವಾಲುಗಳನ್ನು ಸುರಕ್ಷಿತವಾಗಿ ದಾಖಲಿಸಲು ಈ ದೂರು ಪೆಟ್ಟಿಗೆ ವ್ಯವಸ್ಥೆ ನೆರವಾಗಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 2023ರಲ್ಲಿ 168, 2024ರಲ್ಲಿ 157, 2025ರಲ್ಲಿ 182 ಹಾಗೂ 2026ರಲ್ಲಿ ಇದುವರೆಗೆ 63 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ನಾಲ್ಕು ವರ್ಷಗಳಲ್ಲಿ ಒಟ್ಟು 570 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 34 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮಾಹಿತಿ ನೀಡಿದರು.

15 ದಿನಕ್ಕೊಮ್ಮೆ ಪರಿಶೀಲನೆ: ದೂರು ಪೆಟ್ಟಿಗೆಗಳನ್ನು ಅಳವಡಿಸಿದ ಶಾಲೆಗಳಿಗೆ, ಸಂಬಂಧಿತ ಪೊಲೀಸ್ ಠಾಣೆಗಳ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಲಿದ್ದಾರೆ. ವಿದ್ಯಾರ್ಥಿನಿಯರಿಂದ ಬಂದಿರುವ ದೂರುಗಳು ಅಥವಾ ಸಲಹೆಗಳನ್ನು ಪರಿಶೀಲಿಸಿ ಅಗತ್ಯ ಮುಂಜಾಗ್ರತಾ ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಯೋಜನೆ ಜಿಲ್ಲೆಯಲ್ಲೇ ಮೊದಲ ಪ್ರಯತ್ನವಾಗಿದೆ. ವಿದ್ಯಾರ್ಥಿನಿಯರು ಹೆಚ್ಚು ಸಂಖ್ಯೆಯಲ್ಲಿ ತಮ್ಮ ಅಹವಾಲುಗಳನ್ನು ದಾಖಲಿಸಲು ಮುಂದಾದರೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಲೆಗಳಿಗೆ ದೂರು ಪೆಟ್ಟಿಗೆಗಳನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು.

ದೂರದ ಪ್ರದೇಶಗಳಿಗೆ ಆದ್ಯತೆ: ನಗರ ಪ್ರದೇಶಗಳಲ್ಲಿ ಪೊಲೀಸ್ ಠಾಣೆಗಳು ಜನರಿಗೆ ಸುಲಭವಾಗಿ ಲಭ್ಯವಿರುವುದರಿಂದ, ಮುಖ್ಯವಾಗಿ ಯಸಳೂರು, ಅರೇಹಳ್ಳಿ ಸೇರಿದಂತೆ ದೂರದ ಹಾಗೂ ಸಂಪರ್ಕ ಕಡಿಮೆ ಇರುವ ಪ್ರದೇಶಗಳ ಶಾಲೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಆಯಾ ಠಾಣೆಗಳ ವ್ಯಾಪ್ತಿಯ ಶಾಲೆಗಳಲ್ಲಿ ಪೆಟ್ಟಿಗೆಗಳನ್ನು ಅಳವಡಿಸಲಾಗುವುದು ಎಂದರು.

ಈ ಪೆಟ್ಟಿಗೆಗಳಲ್ಲಿ ಬಂದಿರುವ ದೂರುಗಳ ಸತ್ಯಾಸತ್ಯತೆ ಪರಿಶೀಲಿಸಿ, ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಹಾಗೂ ಸಿಬ್ಬಂದಿ ಈ ಯೋಜನೆಯ ಜಾರಿಗೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಡಿಡಿಪಿಐ ಬಲರಾಮ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-36-93424762

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.