ಹಾಸನ: ಆಲೂಗಡ್ಡೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ವರ್ಷದಿಂದ ವರ್ಷಕ್ಕೆ ಬೆಳೆಯ ವಿಸ್ತೀರ್ಣ ಕುಸಿಯುತ್ತಿದೆ. ರೈತರು ಆಲೂಗಡ್ಡೆ ಬೆಳೆಯಲು ಉತ್ತೇಜನ ನೀಡಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಆಲೂಗಡ್ಡೆ ಬೆಳೆಯ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಬಿತ್ತನೆ ಬೀಜವನ್ನು ಕೃಷಿಕರಿಗೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. 2026-27 ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಆಲೂಗಡ್ಡೆಯ ಮಾರಾಟ ದರವನ್ನು ಕ್ವಿಂಟಲ್ಗೆ ₹1,200 ನಿಗದಿಪಡಿಸಲಾಯಿತು. ಮಾರಾಟ ಪ್ರಕ್ರಿಯೆ ಮೇ 15 ರಿಂದ ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ರೈತರ ಹಿತ ಕಾಯುವ ದೃಷ್ಟಿಯಿಂದ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸುವಂತೆ ರೈತರಿಗೆ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಬಿತ್ತನೆ ಬೀಜದ ಬಗ್ಗೆ ಯಾವುದೇ ದೂರುಗಳು ಬಂದರೆ, ಈಗಾಗಲೇ ರಚಿಸಿರುವ ತಂಡ ತಕ್ಷಣ ಕ್ರಮ ವಹಿಸಬೇಕು. ಈಗಾಗಲೇ ಬಿತ್ತನೆ ಬೀಜದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ರೋಗಗ್ರಸ್ತ ಬೀಜ ಎಂದು ಕಂಡು ಬಂದಿರುವುದನ್ನು ಮಾರಾಟ ಮಾಡುವಂತಿಲ್ಲ ಎಂದು ತಿಳಿಸಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಅಂಗಮಾರಿ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ರೈತರಿಗೆ ಸಮಯಕ್ಕೆ ಸರಿಯಾಗಿ ಔಷಧಿಗಳನ್ನು ಒದಗಿಸಬೇಕು. ಬಿತ್ತನೆ ಬೀಜ ಖರೀದಿಸಿದ ವೇಳೆಯಲ್ಲಿ ಕಡ್ಡಾಯವಾಗಿ ಬಿಲ್ ನೀಡಬೇಕು ಎಂದು ತಿಳಿಸಿದರು. ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಯೋಗೇಶ್, ರೈತ ಸಂಘದ ಮುಖಂಡ ಮೂರ್ತಿ, ವರ್ತಕರ ಸಂಘದ ಅಧ್ಯಕ್ಷ ಗೋಪಾಲ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-36-1542384004

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.