ಹಾಸನ: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯ ಕೊರತೆಯಿಂದಾಗಿ ಶೇ 90ರಷ್ಟು ಬಿತ್ತನೆ ಕಾರ್ಯ ಕುಂಠಿತಗೊಂಡಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದೆಡೆ ಮುಂಗಾರು ಹಂಗಾಮಿಗೆ 55,696 ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದ್ದು, ಕೊರತೆ ಆಗದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ.

ಜನವರಿ 1ರಿಂದ ಮೇ 12ರವರೆಗೆ ಜಿಲ್ಲೆಯಲ್ಲಿ ವಾಡಿಕೆ ಮಳೆ 10.3 ಸೆಂ.ಮೀ. ಇದ್ದರೆ, ವಾಸ್ತವವಾಗಿ 7.6 ಸೆಂ.ಮೀ. ಮಾತ್ರ ಮಳೆಯಾಗಿದೆ. ಶೇ 26ರಷ್ಟು ಕೊರತೆ ಕಂಡುಬಂದಿದೆ ಎಂದು ಕೃಷಿ ಇಲಾಖೆ ಅಂಕಿ-ಅಂಶ ನೀಡಿದೆ.

ಜಿಲ್ಲೆಯಲ್ಲಿ ಸುಮಾರು 5,500 ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಹೆಸರು, ಉದ್ದು, ಅಲಸಂದೆ ಸೇರಿದಂತೆ ಇತರೆ ದ್ವಿದಳ ಧಾನ್ಯಗಳನ್ನು ಬಿತ್ತನೆ ಮಾಡಲಾಗು ತ್ತದೆ. ಆದರೆ ಮಳೆ ಕೊರತೆ ಕಾರಣ ಸುಮಾರು 4ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ರೈತರು ಬಿತ್ತನೆ ಮಾಡಿಲ್ಲ. ಕೇವಲ 300 ರಿಂದ 400 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಕಾರ್ಯ ಆಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶಕುಮಾರ್ ತಿಳಿಸಿದ್ದಾರೆ. ಅರಸೀಕೆರೆ, ಚನ್ನರಾಯಪಟ್ಟಣ, ಬೇಲೂರು, ಹಾಸನ ತಾಲ್ಲೂಕಿನ ಬಹುತೇಕ ಭಾಗಗಳಲ್ಲಿ ಮಳೆಯ ಕೊರತೆಯಿಂದಾಗಿ ಬಿತ್ತನೆಗೆ ತೊಡಕು ಉಂಟಾಗಿದೆ. ಬಿತ್ತನೆ ಪೂರ್ವ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗುವ ಆತಂಕ ರೈತರಲ್ಲಿ ಮೂಡಿದೆ ಎಂದರು.

ರಸಗೊಬ್ಬರ ದಾಸ್ತಾನು: ಮುಂಗಾರು ಬಿತ್ತನೆಗೆ ರಸಗೊಬ್ಬರ ಕೊರತೆಯಾಗದಂತೆ ಜಿಲ್ಲಾಡಳಿತ ಕ್ರಮ ವಹಿಸಿದೆ. 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಒಟ್ಟು 55,696 ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ.

ಸೆಪ್ಟೆಂಬರ್ವರೆಗಿನ ಒಟ್ಟು ಬೇಡಿಕೆ 1,64,187 ಟನ್ ಇದ್ದು, ಮೇ ತಿಂಗಳವರೆಗೆ 24,718 ಟನ್ ಬೇಡಿಕೆ ಇದೆ. ಏಪ್ರಿಲ್ 1ರಿಂದ ಈವರೆಗೆ 28,823 ಟನ್ ರಸಗೊಬ್ಬರ ವಿತರಣೆಯಾಗಿದೆ. ಪ್ರಸ್ತುತ ಚಿಲ್ಲರೆ ಮತ್ತು ಸಗಟು ಮಾರಾಟಗಾರರಲ್ಲಿ 53,576 ಟನ್ ಹಾಗೂ ಕೆಎಸ್ಸಿಎಂಎಫ್ ಮತ್ತು ಕೆಎಸ್ಎಸ್ಸಿಯಲ್ಲಿ 2,120 ಟನ್ ದಾಸ್ತಾನು ಇದೆ ಎಂದು ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಮಂಜುನಾಥ್ ಮಾಹಿತಿ ನೀಡಿದರು.

ಮುಂಗಾರು ಬಿತ್ತನೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ಪೂರೈಕೆಯಾಗುವಂತೆ ಜಿಲ್ಲಾಡಳಿತ ಕ್ರಮ ವಹಿಸಿದೆ. ಕಾಳಸಂತೆಯಲ್ಲಿ ಮಾರಾಟ, ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆ ಎಚ್ಚರಿಕೆ ನೀಡಿದೆ.

ರೈತರು ಜಮೀನುಗಳಲ್ಲಿ ಕೃಷಿ ಚಟುವಟಿಕೆಗೆ ತಯಾರಿ ನಡೆಸುತ್ತಿದ್ದಾರೆ. ಆದರೆ ಮಳೆ ಕೊರತೆಯಿಂದ ಬಿತ್ತನೆ ಕಾರ್ಯ ಕುಂಠಿತಗೊಂಡಿದೆ. ಮಳೆ ಆರಂಭವಾಗುತ್ತಿದ್ದಂತೆ ಆಲೂಗಡ್ಡೆ ಬಿತ್ತನೆಯೂ ಪ್ರಾರಂಭವಾಗಲಿದ್ದು, ರೈತರು ಉತ್ತಮ ಮಳೆಯ ನಿರೀಕ್ಷೆಯಲ್ಲಿ ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-36-728258610

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.