ಹಾಸನ: ಕೆಪಿಎಸ್-ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ಅರಸೀಕೆರೆಯ ಕೆರೆಕೋಡಿಹಳ್ಳಿ ಧನಂಜಯಪುರ ಸರ್ಕಾರಿ ಶಾಲೆಯನ್ನು ಜಾವಗಲ್ ಶಾಲೆಗೆ ವಿಲೀನಗೊಳಿಸುವ ಸರ್ಕಾರದ ನಿರ್ಧಾರ ವಿರೋಧಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಗೂ ಪೋಷಕರು ಮಂಗಳವಾರ ಪ್ರತಿಭಟನೆ ನಡೆಸಿದರು.

ಎಐಡಿಎಸ್ಒ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಧನಂಜಯಪುರ ಗ್ರಾಮದಲ್ಲಿ ನಡೆದ ಸಭೆಯಲ್ಲಿ ‘ನಮ್ಮೂರ ಶಾಲೆ ನಮ್ಮೂರಲ್ಲೇ ಉಳಿಯಲಿ’ ಎಂದು ಗ್ರಾಮಸ್ಥರು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಎಐಡಿಎಸ್ಒ ಜಿಲ್ಲಾ ಘಟಕದ ಅಧ್ಯಕ್ಷೆ ಚೈತ್ರಾ, ರಾಜ್ಯದ ಜನತೆ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಐದು ತಿಂಗಳಿಂದ ಎಐಡಿಎಸ್ಒ ನೇತೃತ್ವದಲ್ಲಿ ‘ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ’ಗಳನ್ನು ರಚಿಸಿ ಗ್ರಾಮೀಣ ಶಾಲೆಗಳ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಈಗಾಗಲೇ ಅರಸೀಕೆರೆ ತಾಲ್ಲೂಕಿನ ದೊಡ್ಡಮೇಟಿಕುರ್ಕೆ ಮ್ಯಾಗ್ನೆಟ್ ಶಾಲೆಗೆ ವಿಲೀನಗೊಳ್ಳಬೇಕಿದ್ದ ಶಾಲೆಗಳ ಪೋಷಕರು ‘ನಮಗೆ ಕೆಪಿಎಸ್ ಬೇಡ’ ಎಂದು ಬಿಇಒಗೆ ಪತ್ರ ಬರೆದಿದ್ದಾರೆ. ಆದರೂ ಸರ್ಕಾರ ಶಾಲೆ ಮುಚ್ಚಲು ಅಧಿಕೃತ ಪಟ್ಟಿ ಬಿಡುಗಡೆ ಮಾಡಿರುವುದು ಕಡು ಜನವಿರೋಧಿ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಸ್ಥ ಹಿತೇಂದ್ರ ಮಾತನಾಡಿ, ನಮ್ಮೂರಿನಿಂದ ಜಾವಗಲ್ಗೆ ಬೆಳಿಗ್ಗೆ ಮತ್ತು ಸಂಜೆ ಒಂದೇ ಬಸ್ ಇದೆ. ಕೆರೆ ಏರಿ ಮೇಲೆ ನಡೆದುಕೊಂಡು ಹೋಗಬೇಕು. ಇಂತಹ ಸ್ಥಿತಿಯಲ್ಲಿ ಚಿಕ್ಕ ಮಕ್ಕಳನ್ನು ಹೇಗೆ ಕಳುಹಿಸುವುದು? ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೇ ಸರಿಯಾದ ಬಸ್ ವ್ಯವಸ್ಥೆ ಇಲ್ಲ. ನಮ್ಮೂರಿಗೆ ಬಸ್ ಬಿಡುತ್ತಾರೆ ಎಂಬ ಭರವಸೆ ಇಲ್ಲ. ಸರ್ಕಾರ ಮೊದಲು ನಮ್ಮೂರಿನ ಶಾಲೆಗೆ ಮೂಲಸೌಕರ್ಯ ಕಲ್ಪಿಸಿ ಅಭಿವೃದ್ಧಿಪಡಿಸಲಿ. ಶಾಲೆ ಮುಚ್ಚುವುದು ನಮ್ಮ ಮಕ್ಕಳಿಗೆ ಮಾಡುವ ಮೋಸ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮೂರಿನ ಶಾಲೆ ಉಳಿವಿಗಾಗಿ ಕೊನೆವರೆಗೂ ಹೋರಾಡುತ್ತೇವೆ. ಸರ್ಕಾರದ ನಿರಂಕುಶ ನಡೆಯ ವಿರುದ್ಧ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಎಐಡಿಎಸ್ಒ ಜಿಲ್ಲಾ ಘಟಕದ ಕಾರ್ಯದರ್ಶಿ ಸುಷ್ಮಾ ಹೇಳಿದರು.

ಗ್ರಾ.ಪಂ. ಸದಸ್ಯೆ ಕಾವ್ಯಾ ಹಿತೇಂದ್ರ, ಎಸ್ಡಿಎಂಸಿ ಅಧ್ಯಕ್ಷ ನರಸಿಂಹಮೂರ್ತಿ, ಗ್ರಾಮಸ್ಥರಾದ ಗಿರೀಶ್, ಚೇತನ್, ಶರತ್, ತಿಮ್ಮಪ್ಪ, ಲಕ್ಷ್ಮಣ್, ಮಲ್ಲೇಶ್, ಬೀರಣ್ಣ, ದೇವರಾಜು, ವಿಶ್ವನಾಥ್, ಸುನಿಲ್, ಹರೀಶ್, ಗಂಗಾಧರ್ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-36-380332938

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.